Breaking News

ಅಕ್ರಮವಾಗಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್‌ಗಳ ಗೋದಾಮಿನಲ್ಲಿ ಸ್ಫೋಟ – ಮಾಲೀಕನಿಗೆ ಗಂಭೀರ ಗಾಯ

Spread the love

ದಾವಣಗೆರೆ: ಅಡಿಕೆ ತೋಟದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ದಾವಣಗೆರೆಯಲ್ಲಿಡೆದಿದೆ.

ನಗರದ ರಾಷ್ಟ್ರೀಯ ಹೆದ್ದಾರಿ-48ರ ಸಮೀಪದ ಕೆ. ಕಲ್ಪನಹಳ್ಳಿ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಅನಿಲ್ (40) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿವಕುಮಾರ್ ಅವರಿಗೆ ಸೇರಿದ ಗೋದಾಮನ್ನು ಅನಿಲ್ ಗುತ್ತಿಗೆ ಪಡೆದಿದ್ದ. ಗೋದಾಮಿನಲ್ಲಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್‌ಗಳಲ್ಲಿ ಅನಿಲ ಸೋರಿಕೆ ಸಂಭವಿಸಿ ಏಕಾಏಕಿ ಸ್ಫೋಟ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಸ್ಫೋಟದ ತೀವ್ರತೆಗೆ ಹಲವು ಸಿಲಿಂಡರ್‌ಗಳು ಚಲ್ಲಾಪಿಲ್ಲಿಯಾಗಿ ಹಾರಿಬಿದ್ದಿದ್ದು, ಕೆಲವು ಪಕ್ಕದ ಜಮೀನುಗಳಿಗೂ ಬಿದ್ದಿವೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಗೋದಾಮಿನಲ್ಲಿ ಇನ್ನೂ ಕೆಲವು ಸಿಲಿಂಡರ್‌ಗಳು ಇದ್ದ ಕಾರಣ ಮತ್ತಷ್ಟು ಸ್ಫೋಟ ಸಂಭವಿಸುವ ಆತಂಕ ಕೆಲಕಾಲ ಮನೆ ಮಾಡಿತ್ತು. ಸದ್ಯ ಸ್ಥಳವನ್ನು ಭದ್ರತಾ ವಲಯವಾಗಿ ಘೋಷಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಸಿಲಿಂಡರ್‌ಗಳನ್ನು ಯಾವ ಉದ್ದೇಶಕ್ಕಾಗಿ ಸಂಗ್ರಹಿಸಲಾಗಿತ್ತು ಹಾಗೂ ಸ್ಫೋಟಕ್ಕೆ ನಿಖರ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ
ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

Spread the loveಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಮಂಜರಗಿ (46) ಕೊಲೆ ಪ್ರಕರಣ ರಹಸ್ಯ ಬಯಲಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ