Breaking News

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಮಂದಿಗೆ ಗಾಯ

Spread the love

ಮೈಸೂರು: ಮೈಸೂರಿನ ರಿಂಗ್ ರಸ್ತೆಯ ಸಮೀಪದ ಫಾಕ್ಸ್ ಜೆನ್ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ  ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ