Breaking News

ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿ ಸಮುದ್ರಪಾಲು

Spread the love

ಕಾರವಾರ: ರೀಲ್ಸ್  ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ ಕನ್ನಡ  ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ  ತೀರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ ಭಟ್ಟರಾಯಿ (26) ರೀಲ್ಸ್ ಮಾಡಲು ಹೋಗಿ ಸಮುದ್ರದಲ್ಲಿ ಕಾಣೆಯಾಗಿದ್ದಾರೆ.

ಐದು ಜನ ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಪ್ರವಾಸ ಬಂದಿದ್ದ ಯುವಕ ಖಾಸಗಿ ರೆಸಾರ್ಟ್ನಲ್ಲಿ ಮೂರು ದಿನದಿಂದ ತಂಗಿದ್ದರು. ಇಂದು ಚಕ್ ಔಟ್ ಮಾಡಬೇಕಿದ್ದ ಯುವಕ ಸ್ಬೇಹಿತರ ಜೊತೆ ಕಡ್ಲೆ ಸಮುದ್ರತೀರದಲ್ಲಿ ರೀಲ್ಸ್ ಮಾಡಲು ಹೋಗಿದ್ದಾರೆ. ಈ ವೇಳೆ ಜೀವನ್ ಸಮುದ್ರದಲ್ಲಿ ಇಳಿದಾಗ ಅಲೆಗಳ ಹೊಡೆತಕ್ಕೆ ಕೊಚ್ಚಿಹೋಗಿದ್ದಾನೆ.

ಇನ್ನು ಕರಾವಳಿ ಕಾವಲುಪಡೆ, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದು, ಈವರೆಗೂ ಜೀವನ್ ಪತ್ತೆಯಾಗಿಲ್ಲ. ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ