ವಿಜಯಪುರ: ಟೈರ್ ಬ್ಲಾಸ್ಟ್ ಆಗಿ ಟಿಪ್ಪರ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ನಡೆದಿದೆ.
ಟಿಪ್ಪರ್ ಟೈರ್ ಬ್ಲಾಸ್ಟ್ ಆದ ಕಾರಣ ಅಪಘಾತ ಉಂಟಾಗಿದೆ. ಭೀಕರ ಅಪಘಾತದಲ್ಲಿ ಟಿಪ್ಪರ್‌ನಲ್ಲಿದ್ದ ಚಾಲಕ ಹಾಗೂ ಆತನ ಪತ್ನಿ, ಸರ್ಕಾರಿ ಬಸ್ ಚಾಲಕ ಮೃತಪಟ್ಟಿದ್ದಾರೆ. ಟಿಪ್ಪರ್ ಚಾಲಕ ಅಶೋಕ ಉಟಗಿ ಹಾಗೂ ಪತ್ನಿ ರಾಧಾಬಾಯಿ, ಬಸ್ ಚಾಲಕ ಹನುಮಂತ ಛವಲಾದಿ ಮೃತರು.
ಟಿಪ್ಪರ್ ಚಡಚಣದತ್ತ ಹೊರಟಿತ್ತು. ಸರ್ಕಾರಿ ಬಸ್ ಚಡಚಣದಿಂದ ವಿಜಯಪುರದತ್ತ ಹೊರಟಿದ್ದ ವೇಳೆ ದುರಂತ ನಡೆದಿದೆ. ಪಿಎಸ್‌ಐ ಸೊಮೇಶ ಗೆಜ್ಜಿ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಧ ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7