Breaking News

ವಚನಾನಂದ ಶ್ರೀಗೆ ಜಾಮೀನು ನೀಡಿದ ರೀತಿ ಆಘಾತಕಾರಿ: ಕೆಳ ನ್ಯಾಯಾಲಯದ ವಿರುದ್ಧ ಹೈಕೋರ್ಟ್ ಗರಂ!

Spread the love

ಬೆಂಗಳೂರು: ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳಿಗೆ ಕೆಳ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಧಾನದ ಕುರಿತು ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ.

ದೂರು ದಾಖಲಾಗುವ ಮುನ್ನವೇ ಜಾಮೀನು ನೀಡಿರುವ ರೀತಿ ಆಘಾತಕಾರಿಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಚನಾನಂದ ಶ್ರೀಗಳಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಕೆಳ ನ್ಯಾಯಾಲಯದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಹೈಕೋರ್ಟ್ ಪೀಠವು, “ಸ್ವಾಮೀಜಿ ವಿರುದ್ಧ ಅತ್ಯಂತ ಗಂಭೀರ ಸ್ವರೂಪದ ಆರೋಪಗಳ ಅಡಿಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹೀಗಿದ್ದರೂ, ಪೊಲೀಸರು ಅಧಿಕೃತವಾಗಿ ದೂರು ದಾಖಲಿಸಿಕೊಳ್ಳುವ ಮುನ್ನವೇ ಅವರಿಗೆ ನಿರೀಕ್ಷಣಾ ಜಾಮೀನು ಒದಗಿಸಲಾಗಿದೆ. ಮೇಲ್ನೋಟಕ್ಕೆ ಈ ಜಾಮೀನು ನೀಡಿದ ವಿಧಾನವೇ ಸರಿಯಾಗಿಲ್ಲ” ಎಂದು ನ್ಯಾ. ನಾಗಪ್ರಸನ್ನ ಅವರು ಕಳವಳ ವ್ಯಕ್ತಪಡಿಸಿದರು.

ಕೆಳ ನ್ಯಾಯಾಲಯದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್, ಇದೀಗ ಆರೋಪಿ ವಚನಾನಂದ ಶ್ರೀಗಳಿಗೆ ತುರ್ತು ನೋಟಿಸ್ ಜಾರಿ ಮಾಡಿದೆ. ಸಂತ್ರಸ್ತ ತಾಯಿಯ ಮೇಲ್ಮನವಿ ಅರ್ಜಿಯ ಮುಂದಿನ ಆಲಿಕೆಯನ್ನು ನ್ಯಾಯಾಲಯವು ಜೂನ್ 23ಕ್ಕೆ ನಿಗದಿಪಡಿಸಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ