Breaking News

ಪಠ್ಯೇತರ ಚಟುವಟಿಕೆಗೆ ಆದ್ಯತೆ ಅಗತ್ಯ

Spread the love

ಮಾಂಜರಿ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಶಿವಶಕ್ತಿ ಶುಗರ್ಸ್‌ ಮಾನವ ಸಂಪನ್ಮೂಲ ಅಧಿಕಾರಿ ಬಿ.ಎಸ್.ಮುಧೋಳ ಹೇಳಿದರು.
ಯಡ್ರಾವ ಗ್ರಾಮದಲ್ಲಿರುವ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಸಮಾರಂಭಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಸಲಹಾ ಸಮಿತಿ ಅಧ್ಯಕ್ಷ ಸತ್ಯಪ್ಪ ಭಿಷ್ಟೆ ಮಾತನಾಡಿ, ಸೃಜನಾತ್ಮಕ ಕಲಿಕೆಯಿಂದ ಮಕ್ಕಳ ವ್ಯಕ್ತಿತ್ವ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ದಯಾನಂದ ಕಬ್ಬೂರಿ, ಸದಾಶಿವ ನಿಪ್ಪಾಣಿ, ಕಲ್ಲಪ್ಪ ನಿಂಗನೂರು, ರಾಜು ಸಜ್ಜನ್ನವರ, ಶಿವರುದ್ರ ಕಾಂಬಳೆ, ಧನಶ್ರೀ ಚೌಗುಲೆ, ಸುಹಾಸಿನಿ ಹಿರೇಮಠ ಇತರರಿದ್ದರು.

Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ