Breaking News

ಶಫೀ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು 17 ವರ್ಷದ ಜೀವಿತಾ ಆತ್ಮಹತ್ಯೆ

Spread the love

ಕೋಲಾರ: ಅನ್ಯಧರ್ಮದ ಯುವಕನೊಬ್ಬ ಕೊಟ್ಟ ಕಿರುಕುಳದಿಂದ ಬೇಸರಗೊಂಡು 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕೋಲಾರದ  ಕೆಜಿಎಫ್‌ನ ದೊಡ್ಡಕಾರಿ ಗ್ರಾಮದಲ್ಲಿ ನಡೆದಿದೆ.

ಜೀವಿತಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. 22 ವರ್ಷದ ಶಫೀ ಎಂಬ ಯುವಕ ನಿತ್ಯವೂ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ. 

ಯುವಕ ಬಾಲಕಿಯ ಪೋಷಕರಿಗೂ ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ ಎಂದು ಧಮ್ಕಿ ಹಾಕಿದ್ದ. ಇದರಿಂದ ಪೋಷಕರು ಬಾಲಕಿಗೆ ಬೈದಿದ್ದರು. ಇದರಿಂದ ಮನನೊಂದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದ ಹಿಂದೂ ಸಂಘಟನೆಗಳ ಮುಖಂಡರು, ಆರೋಪಿ ಬಂಧನಕ್ಕೆ ಒತ್ತಾಯ ಮಾಡಿದ್ದಾರೆ.

ಸದ್ಯ ಪೋಷಕರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ