Breaking News

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the love

ಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು ತಿಸ್ಕರಿಸಿದ್ದಾರೆ.

ಮತಗಟ್ಟೆಯೊಳಗೆ ಯಾವುದೇ ನಿಯಮ ಉಲ್ಲಂಘನೆ ಆಗಲ್ಲ ಎಂದು ಹೇಳಿ ಚುನಾವಣಾಧಿಕಾರಿಗಳು ಕಾಂಗ್ರೆಸ್‌ (Congress) ಆಕ್ಷೇಪವನ್ನ ತಿರಸ್ಕರಿಸಿದ್ದಾರೆ. 
ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರಿಗೆ ಬಹಿರಂಗವಾಗಿ ಪತ್ರ ಹಾಕುತ್ತೇನೆ ಎಂದಿದ್ದರು. ಇದನ್ನ ಕಾಂಗ್ರೆಸ್‌ ಪ್ರಶ್ನೆ ಮಾಡಿತ್ತು. ಯತ್ನಾಳ್‌ ರೂಲ್‌ 39 ಉಲ್ಲಂಘನೆ ಮಾಡಿದ್ದಾರೆ. ಅವರ ಮತವನ್ನ ಅಸಿಂಧುಗೊಳಿಸುವಂತೆ ಒತ್ತಾಯಿಸಿತ್ತು. ಆದ್ರೆ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ ಎಂದಿರುವ ಚುನಾವಣಾಧಿಕಾರಿಗಳು ಕಾಂಗ್ರೆಸ್‌ ಆಕ್ಷೇಪವನ್ನ ತಿರಸ್ಕರಿಸಿದ್ದಾರೆ.
ಇನ್ನೂ ರಾಜ್ಯದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾನ ಪೂರ್ಣಗೊಂಡಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಬಸವರಾಜ್ ರಾಯರೆಡ್ಡಿ ಕೊನೆ ಮತದಾನ ಮಾಡುವ ಮೂಲಕ ಮತದಾನ ಪೂರ್ಣಗೊಂಡಿದೆ. ಸಂಜೆ 5ರ ಬಳಿಕ ಫಲಿತಾಂಶ ಪ್ರಕಟವಾಗಲಿದೆ.


Spread the love

About Laxminews 24x7

Check Also

10 ಲಕ್ಷ ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ – ಕುಕ್ಕರ್‌ನಿಂದ ಹಲ್ಲೆ ಮಾಡಿ ಹತ್ಯೆ

Spread the loveಕೋಲಾರ: ವ್ಯಕ್ತಿಯೊಬ್ಬ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕುಕ್ಕರ್‌ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಕೋಲಾರದ  ಹಸಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ