Breaking News

ಕರ್ನಾಟಕ ಹೆಚ್ಚುವರಿ ಕಾವೇರಿ ನೀರನ್ನು ಮಾತ್ರ ಹರಿಸುತ್ತಿದೆ – ವಿಜಯ್‌ ಸರ್ಕಾರದ ಕ್ಯಾತೆ

Spread the love

ಚೆನ್ನೈ: ಸುಪ್ರೀಂಕೋರ್ಟ್ ಆದೇಶದ ಅನ್ವಯ ಪ್ರತಿ ವರ್ಷ ನಿಗಧಿತ ಪ್ರಮಾಣದಲ್ಲಿ ಕಾವೇರಿ ನೀರು ಹರಿಸಿದರೂ ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳುನಾಡಿನ ಹೊಸ ಸರ್ಕಾರ ತಗಾದೆ ತೆಗೆದಿದೆ. ಕರ್ನಾಟಕ, ತಮಿಳುನಾಡಿನ ನೀರಿನ ಪಾಲು ಹರಿಸುತ್ತಿಲ್ಲ. ಅದರ ಬದಲಿಗೆ ಕೇವಲ ಹೆಚ್ಚುವರಿ ನೀರನ್ನು ಮಾತ್ರ ಹರಿಸಲಾಗುತ್ತಿದೆ ಎಂದು ಆರೋಪಿಸಿದೆ. 

ತಮಿಳುನಾಡಿನಲ್ಲಿ ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿದರು. ರಾಜ್ಯಪಾಲರ ಭಾಷಣದಲ್ಲಿ ಕರ್ನಾಟಕದ ವಿರುದ್ಧ ತಮಿಳುನಾಡು ಸರ್ಕಾರದ ಈ ಆರೋಪ ಸೇರಿತ್ತು.

ತಮಿಳುನಾಡಿಗೆ ಅನಾದಿ ಕಾಲದಿಂದಲೂ ಕಾವೇರಿ ನೀರನ್ನು ಬಳಸುವ ಹಕ್ಕಿದೆ. ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ಹಕ್ಕು ಎತ್ತಿಹಿಡಿಯಲ್ಪಟ್ಟ ನಂತರವೂ ನೀರನ್ನು ಪಡೆಯಲು ಪ್ರತಿ ವರ್ಷವೂ ಹೋರಾಟ ನಡೆಸುತ್ತಿದ್ದೇವೆ. ಕರ್ನಾಟಕ ಸರ್ಕಾರವು ನಮಗೆ ಸಿಗಬೇಕಾದ ನೀರನ್ನು ನೀಡುವ ಬದಲು, ಹೆಚ್ಚುವರಿ ನೀರನ್ನು ಮಾತ್ರ ತಮಿಳುನಾಡಿಗೆ ಬಿಡುಗಡೆ ಮಾಡುತ್ತಿದೆ.

ಈ ಪರಿಸ್ಥಿತಿಯಲ್ಲಿ, ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆಯನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಿದೆ. ಈ ಯೋಜನೆ ಜಾರಿಗೆ ಬಂದರೆ, ಕೃಷಿ ಉತ್ಪಾದನೆಯ ಜೊತೆಗೆ ರೈತರ ಜೀವನೋಪಾಯದ ಮೇಲೂ ತೀವ್ರ ಪರಿಣಾಮ ಬೀರುತ್ತದೆ. ಇದನ್ನು ನಿಲ್ಲಿಸಲು ಮತ್ತು ಸರಿಯಾದ ಸಮಯದಲ್ಲಿ ತಮಿಳುನಾಡಿಗೆ ನೀರು ಒದಗಿಸಲು ಸರ್ಕಾರ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಿದೆ.


Spread the love

About Laxminews 24x7

Check Also

10 ಲಕ್ಷ ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ – ಕುಕ್ಕರ್‌ನಿಂದ ಹಲ್ಲೆ ಮಾಡಿ ಹತ್ಯೆ

Spread the loveಕೋಲಾರ: ವ್ಯಕ್ತಿಯೊಬ್ಬ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕುಕ್ಕರ್‌ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಕೋಲಾರದ  ಹಸಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ