Breaking News

ಪವಿತ್ರಾಗೌಡಗೆ ಯಾವುದೇ ವಿಶೇಷ ಸೌಲಭ್ಯ ನೀಡ್ತಿಲ್ಲ– ಜೈಲಧಿಕಾರಿಗಳ ಸ್ಪಷ್ಟನೆ

Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪವನ್ನು ಜೈಲಧಿಕಾರಿಗಳು ತಳ್ಳಿ ಹಾಕಿ, ಯಾವುದೇ ವಿಶೇಷ ಸೌಲಭ್ಯ ನೀಡುತ್ತಿಲ್ಲ ಎಂದು ಸ್ಷಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್‌, ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡ್ತಿದ್ದಾರೆ. ಪ್ರತಿದಿನ ಬಾಕ್ಸ್‌ನಲ್ಲಿ ಊಟ ತಂದುಕೊಡ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಇದೀಗ ಜೈಲಧಿಕಾರಿಗಳು ಅಧಿಕೃತ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಯಾವುದೇ ಶೇಷ ಸೌಲಭ್ಯ ನೀಡ್ತಿಲ್ಲ ಎಂದು ತಿಳಿಸಿದ್ದಾರೆ.

ಈ ಹಿಂದೆ ಜೈಲಿನಲ್ಲಿ ಇದ್ದ ಸಂಧ್ಯಾ ನಾಗರಾಜ್‌ ಪವಿತ್ರಾಗೌಡ ಅವರನ್ನ ಭೇಟಿ ಮಾಡಿದ್ರಂತೆ. ಹೀಗಾಗಿ ಅವರಿಗೆ ಎಲ್ಲಾ ಸೌಲಭ್ಯ ಸಿಗ್ತಿದೆ ಅಂತ ಮಾಧ್ಯಮಗಳ ಮುಂದೆ ಹೇಳಿದ್ರು. ಈ ಆರೋಪವನ್ನು ಅಲ್ಲಗಳೆದಿರುವ ಪವಿತ್ರಾಗೌಡ ಜೈಲಿನಲ್ಲಿ ಇದ್ದುಕೊಂಡೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೊತೆಗೆ ರಶ್ಮಿ ಎಂಬ ಆರೋಪಿಯೂ ದೂರು ನೀಡಿದ್ದಾರೆ. ಸದ್ಯ ಜೈಲಿನಲ್ಲಿರುವ ಪವಿತ್ರಾಗೌಡ ತಮ್ಮ ಆತ್ಮಚರಿತ್ರೆ ಬರೆಯಲು ಆರಂಭಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ