Breaking News

ಭೀಕರ ಅಪಘಾತ – ಇಬ್ಬರು ದುರ್ಮರಣ, ಮೂವರು ಗಂಭೀರ

Spread the love

ಚಾಮರಾಜನಗರ: ಚಾಮರಾಜನಗರ  ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿರುವ ಮುಡಿಗುಂಡ ಸೇತುವೆ ಬಳಿ ರಾತ್ರಿ ಭೀಕರ ಕಾರು ಅಪಘಾತ  ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಕೊಳ್ಳೇಗಾಲ‌ ನ್ಯಾಯಾಲಯ ಶಿರಸ್ತೆದಾರ ನಂಜುಂಡಪ್ಪ ಹಾಗೂ ಸಿಬ್ಬಂದಿ ಯಮುನಪ್ಪ ಎಂದು ಹೇಳಲಾಗುತ್ತಿದ್ದು, ಕಾರಿನಲ್ಲಿದ್ದ ಕೃಷ್ಣಪ್ಪ, ಲೋಕೇಶ್ ಹಾಗೂ ಶಂಕರಪ್ಪ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ‌ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ, ವಾಹನವನ್ನು ವಶಕ್ಕೆ ಪಡೆದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ