Breaking News

ಗ್ರಾಹಕನ ಸೋಗಿನಲ್ಲಿ ಬಂದು ಸಿನಿಮಾ ಶೈಲಿಯಲ್ಲಿ ಚಿನ್ನದ ಸರ ಕದ್ದು ಪರಾರಿ

Spread the love

ಬಾಗಲಕೋಟೆ: ಜಿಲ್ಲೆಯ ವಿದ್ಯಾಗಿರಿಯಲ್ಲಿ ಹಗಲು ಹೊತ್ತಿನಲ್ಲೇ ಗ್ರಾಹಕನ ಸೋಗಿನಲ್ಲಿ ಬಂದ ಖದೀಮನೊಬ್ಬ ಆಭರಣ ಅಂಗಡಿಯಿಂದ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.

ಬಾಗಲಕೋಟೆ  ವಿದ್ಯಾಗಿರಿ ಠಾಣಾ ವ್ಯಾಪ್ತಿಯ ಪ್ರಸಿದ್ಧ ಬೆಂಬಳಗಿ ಜ್ಯುವೆಲ್ಲರ್ಸ್  ಆಭರಣ ಮಳಿಗೆಯಲ್ಲಿ ಈ ಸಿನಿಮಾ ಮಾದರಿಯ ಕಳ್ಳತನ ನಡೆದಿದ್ದು, ಇಡೀ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜೀನ್ಸ್ ಪ್ಯಾಂಟ್, ಲಾಂಗ್ ಶರ್ಟ್ ಹಾಗೂ ಶೂ ಧರಿಸಿ ಫುಲ್ ಅಪ್‌ಟುಡೇಟ್ ಆಗಿ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ, ಚಿನ್ನದ ಸರ ಖರೀದಿಸುವ ನೆಪದಲ್ಲಿ ಅಂಗಡಿಗೆ ಪ್ರವೇಶಿಸಿದ್ದಾನೆ. ಅಂಗಡಿಯ ಸಿಬ್ಬಂದಿ ಆತನಿಗೆ ವಿವಿಧ ವಿನ್ಯಾಸದ ಚಿನ್ನದ ಸರಗಳನ್ನು ತೋರಿಸುತ್ತಾ ವಿವರಣೆ ನೀಡುತ್ತಿದ್ದರು. ಈ ವೇಳೆ ಕಳ್ಳನ ಪಕ್ಕದಲ್ಲೇ ನಿಂತಿದ್ದ ದಂಪತಿಯೊಬ್ಬರು ತಮಗಾಗಿ ಬೇರೆ ಆಭರಣಗಳನ್ನು ನೋಡುವುದರಲ್ಲಿ ಮಗ್ನರಾಗಿದ್ದರು.


Spread the love

About Laxminews 24x7

Check Also

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್- ಚಿಕ್ಕೋಡಿಯ ಬಟ್ಟೆ ಅಂಗಡಿಗೆ ಬೆಂಕಿ

Spread the loveಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ಪರಿಣಾಮವಾಗಿ ಬಟ್ಟೆ ಅಂಗಡಿಯೊಂದು ಸಂಪೂರ್ಣವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ