Breaking News

ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಬೆಳಗಾವಿಯಲ್ಲಿ ನಡೆಯಲಿದೆ ನೇರ ಸಂದರ್ಶನ ಮತ್ತು ಉದ್ಯೋಗ ಮೇಳ

Spread the love

ಬೆಳಗಾವಿ: ಬೆಳಗಾವಿ ನಗರದ ಕಾ.ರಾ.ವಿ ಆಸ್ಪತ್ರೆ ಹಾಗೂ ಇಲ್ಲಿನ ಚಿಕಿತ್ಸಾಲಯಗಳಿಗೆ ಗುತ್ತಿಗೆ ಆಧಾರದ ಮೇಲೆ 5 ವಿಮಾ ವೈದ್ಯಾಧಿಕಾರಿಗಳನ್ನು (ಮೆರಿಟ್ ಕಮ್ ರೊಸ್ಟರ್) ಮೂಲಕ ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುವುದು.

ಜೂನ್ 24 ರಂದು ಬೆಳಗ್ಗೆ 10.30 ರಿಂದ ಸಂಜೆ 4, ಗಂಟೆಯವರೆಗೆ ಬೆಳಗಾವಿಯ ಕಾ.ರಾ.ವಿ ಆಸ್ಪತ್ರೆಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23324216 / 23324218 ಗೆ ಸಂಪರ್ಕಿಸಬಹುದು ಎಂದು ಕಾ.ರಾ.ವಿ ಆಸ್ಪತ್ರೆ ವೈದ್ಯಕೀಯ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ ವತಿಯಿಂದ ಎಸ್‌ಎಸ್‌ಎಲ್‌ಸಿ, ಐಟಿಐ, ಪಿಯುಸಿ, ಪದವಿ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಜೂನ್ 22 (ಸೋಮವಾರ) ರಂದು “ಮಿನಿ ಉದ್ಯೋಗ ಮೇಳ” ವನ್ನು ಬೆಳಗಾವಿ ಶಿವಬಸವ ನಗರದ ಶ್ರೀ ಸಿದ್ದರಾಮೇಶ್ವರ ಎಜುಕೇಶನ್ ಟ್ರಸ್ಟ್ ಪ್ರೈವೇಟ್ ಐಟಿಐ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://tinyurl.com/3ka8s5pf ಈ ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 7975856566, 7899683036 ಗೆ ಕಛೇರಿ ಸಮಯದಲ್ಲಿ ಮಾತ್ರ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love

About Laxminews 24x7

Check Also

ತಡವಾಗಿ ಹೋಗಿದ್ದೇ ಹಿಂದಿನ ಸಾಲಲ್ಲಿ ಕೂರಲು ಕಾರಣ: ಸಿದ್ದರಾಮಯ್ಯ ಸ್ಪಷ್ಟನೆ

Spread the loveಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ  ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ