Breaking News

ಕರಾವಳಿ & ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

Spread the love

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ  ಅವರನ್ನು ನೇಮಕ ಮಾಡಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌  ಅಧ್ಯಕ್ಷತೆಯಲ್ಲಿ ಶುಕ್ರವಾರ ಕರಾವಳಿ ಪ್ರವಾಸೋದ್ಯಮ ಸಭೆ ನಡೆಸಲಾಯಿತು. ಸಭೆಯಲ್ಲಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಇನ್ನು 20 ದಿನದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.

ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ಪ್ರತ್ಯೇಕ ನೀತಿ ರಚನೆ ಮಾಡಲಾಗಿದೆ. ಪ್ರತ್ಯೇಕ ನೀತಿಯ ಬಗ್ಗೆ ಮಂಗಳೂರು ಸಚಿವ ಸಂಪುಟದಲ್ಲಿ ಚರ್ಚಿಸಿ ಸಿಎಂ ಒಪ್ಪಿಗೆ ಪಡೆಯಲಿದ್ದಾರೆ. ಜೊತೆಗೆ ಆ ಭಾಗದಲ್ಲಿ ಹೋಂ ಸ್ಟೇಗಳಿಗೆ ತುಂಬಾ ನಿಯಮ ರೂಪಿಸಲಾಗುತ್ತಿದೆ. ಅವುಗಳನ್ನ ಸಡಿಲಗೊಳಿಸುವಂತೆ ಸೂಚಿಸಲು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ತುಷಾರ್ ಗಿರಿನಾಥ್ ಸೇರಿದಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ