Breaking News

ಅಕ್ರಮ ಭೂಮಿ ಮಂಜೂರಾತಿ ಪ್ರಕರಣ – ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ

Spread the love

ಹಾಸನ: ಅಕ್ರಮ ಭೂಮಿ ಮಂಜೂರಾತಿ ಪ್ರಕರಣದಲ್ಲಿ  ಜೆಡಿಎಸ್‌ನ ಮಾಜಿ ಶಾಸಕ ಕೆ.ಎಸ್ ಲಿಂಗೇಶ್  ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

2018 ರಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಲಿಂಗೇಶ್ ಅವರು ಶಾಸಕಾರಾಗಿ ಆಯ್ಕೆಯಾಗಿದ್ದರು. ಆಗ ಅವರು ಬಗರ್ ಹುಕುಂ ಕಮಿಟಿಯ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಅಕ್ರಮವಾಗಿ ಭೂಮಿ ಮಂಜೂರಾತಿ ಮಾಡಿರುವ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು.

ಅಕ್ರಮ ಭೂಮಿ ಮಂಜೂರಾತಿ ಆರೋಪದ ಬಗ್ಗೆ ಕೋಲಾರದ ಆರ್‌ಟಿಐ ಕಾರ್ಯಕರ್ತ ರಮೇಶ್‌ಕುಮಾರ್ ಬೇಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದರು. ಇದೀಗ ಸಿಐಡಿ ಪೊಲೀಸರ ತಂಡ ಹಳೇಬೀಡಿನಲ್ಲಿರುವ ಅವರ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆದು, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಈ ಪ್ರಕರಣದಲ್ಲಿ ಅಂದಿನ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಹಲವರು ಬೇಲ್‌ಗಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳಿಗೆ ಹಾಗೂ ಭೂಮಿ ಪಡೆದವರಿಗೆ ಬೇಲ್ ಸಿಕ್ಕಿತ್ತು. ಕೆ.ಎಸ್.ಲಿಂಗೇಶ್ ಅವರಿಗೆ ಜಾಮೀನು ಸಿಕ್ಕಿರಲಿಲ್ಲ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ