Breaking News

ಚಿನ್ನದ ಓಲೆಗಾಗಿ 80 ವರ್ಷದ ಅಜ್ಜಿಯ ಕೊಲೆ – ಕಿವಿ ಕತ್ತರಿಸಿ ಪರಾರಿಯಾದ ಕಳ್ಳ

Spread the love

ಚಿಕ್ಕಬಳ್ಳಾಪುರ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕೊಲೆಗೈದು, ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ.

80 ವರ್ಷದ ಸುಬ್ಬಮ್ಮ ಮೃತ ವೃದ್ಧೆ. ಯಾರೂ ಇಲ್ಲದ ವೇಳೆ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ವೃದ್ಧೆಯ ತಲೆಗೆ ಬಲವಾಗಿ ಹೊಡೆದಿದ್ದಾನೆ. ಬಳಿಕ ಕಿವಿಗಳನ್ನು ಕತ್ತರಿಸಿ, ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾನೆ.

ಕೆಲಸಕ್ಕೆ ಹೋಗಿದ್ದ ಸುಬ್ಬಮ್ಮ ಅವರ ಮಗಳು ಮನೆಗೆ ಬಂದಾಗ ವೃದ್ಧೆ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಅವರನ್ನು ಗೌರಿಬಿದನೂರು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಬ್ಬಮ್ಮ ಮೃತಪಟ್ಟಿದ್ದಾರೆ.

ಈ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಎಸ್ಪಿ ಹಾಗೂ ಎಎಸ್ಪಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ