Breaking News

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು

Spread the love

ದಾವಣಗೆರೆ: ಇಲ್ಲಿನ ಕೈದಾಳೆ ಗ್ರಾಮದಲ್ಲಿ ಪ್ರೀತಿಸಿ ಮದುವೆಯಾಗಿದ್ದ  ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಗ್ರಾಮದ ನಿವಾಸಿಯಾಗಿದ್ದ ಅಮೂಲ್ಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. ಈಕೆ ಅದೇ ಗ್ರಾಮದ ಧನುಷ್ (19) ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಇಬ್ಬರು ಕ್ಲಾಸ್‌ಮೇಟ್‌ ಆಗಿದ್ದರು. ಇವರ ಪ್ರೀತಿಗೆ ಜಾತಿ ಕಾರಣಕ್ಕೆ ಕುಟುಂಬಸ್ಥರು ವಿರೋಧಿಸಿದ್ದರು. ಆದರೆ ಇಬ್ಬರೂ ಪೊಲೀಸ್‌ ಭದ್ರತೆಯಲ್ಲಿ ಮದುವೆಯಾಗಿದ್ದರು.

ಮದುವೆಯಾಗಿ ಒಂದೇ ವರ್ಷದಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಯುವತಿಯ ಪೋಷಕರು ಆಕೆಯ ಪತಿ ಹಾಗೂ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ.

ಈ ಸಂಬಂಧ ಧನುಷ್‌ ಹಾಗೂ ಆತನ ‌ಕುಟುಂಬಸ್ಥರ ವಿರುದ್ಧ ದಾವಣಗೆರೆ ಮಹಿಳಾ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. ಧನುಷ್‌ ಹಾಗೂ ಆತನ ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ