Breaking News

ಪತಿಯನ್ನು ಕೊಲೆಗೈದ ಪತ್ನಿಗೆ ಕೊರೊನಾ- 13 ಪೊಲೀಸರು ಕ್ವಾರಂಟೈನ್‌

Spread the love

ಬೆಂಗಳೂರು: ಕೊಲೆ ಆರೋಪಿಗೆ ಕೋವಿಡ್‌ 19 ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಅಮೃತಹಳ್ಳಿ ಪೊಲೀಸ್ ಠಾಣೆಯ 13 ಮಂದಿ ಪೊಲೀಸರು ಕ್ವಾರಂಟೈನ್ ಆಗಿದ್ದಾರೆ.

ಜೂನ್‌ 9 ರಂದು ಪ್ರಿಯರ ಅಭಿಷೇಕ್ ಜೊತೆಗೆ ಸೇರಿ ಗಂಡ ಹರೀಶ್‌ನನ್ನು ಪತ್ನಿ ಕೃಪಾ ಕೊಲೆ ಅಮೃತಹಳ್ಳಿಯಲ್ಲಿ ಮಾಡಿಸಿದ್ದಳು. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಇಬ್ಬರು ಸೇರಿ ಹರೀಶ್‌ನನ್ನು ಕೊಲೆ ಮಾಡಿಸಿದ್ದಳು.

ಕೊಲೆ ಮಾಡಿದ ಬಳಿಕ ಗಂಡ ಕಾಣೆಯಾಗಿದ್ದಾನೆ ಅಂತಾ ಪೊಲೀಸ್ ಠಾಣೆಗೆ ಕೃಪಾ ದೂರು ನೀಡಿದ್ದಳು. ಪ್ರಕರಣ ದಾಖಲಿಸಿದ್ದ ಪೊಲೀಸರು ಪತ್ನಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಅನುಮಾನದ ಹಿನ್ನೆಲೆಯಲ್ಲಿ ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾದ ಸತ್ಯ ಗೊತ್ತಾಗಿದೆ.

ಇಬ್ಬರನ್ನು ಬಂಧಿಸಿ ಕೊರೊನಾ ಪರೀಕ್ಷೆ ನಡೆಸಿದ್ದರು. ಈ ವೇಳೆ ಪಾಸಿಟಿವ್‌ ಬಂದಿದೆ. ಠಾಣೆಯನ್ನು ಸ್ಯಾನಿಟೈಸ್‌ ಮಾಡಲಾಗಿದ್ದು, 13 ಮಂದಿ ಪೊಲೀಸರನ್ನು ಕ್ವಾರಂಟೈನ್‌ ಮಾಡಲಾಗಿದೆ.


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ