Breaking News

ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಪಲ್ಟಿ – ವೈದ್ಯ ಪಾರು

Spread the love

ಹಾಸನ: ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಪಲ್ಟಿಯಾದ ಪರಿಣಾಮ ವೈದ್ಯ ಸಣ್ಣಪುಟ್ಟ ಗಾಯಗೊಂಡು ಪಾರಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ.

ಹಾಸನ ನಗರದ ಜನಪ್ರಿಯ ಆಸ್ಪತ್ರೆ ಮಾಲೀಕ ಹಾಗೂ ವೈದ್ಯ ಅಬ್ದುಲ್ ಬಶೀರ್ ಪುತ್ರ ವೈದ್ಯ ಡಾ.ಶಾರುಖ್ ಅಬ್ದುಲ್ಲಾ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ. ಮೂರು ಪಲ್ಟಿ ಹೊಡೆದು ರಸ್ತೆ ಬದಿಗೆ ಕಾರು ಉರುಳಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಚನ್ನಮ್ಮನ ಕಿತ್ತೂರು: ಟೆಂಪೊ ಪಲ್ಟಿ, ಮೂವರು ಸ್ಥಳದಲ್ಲೇ ಸಾವು, ಆರು ಮಂದಿಗೆ ಗಾಯ

Spread the loveಚನ್ನಮ್ಮನ ಕಿತ್ತೂರು: ಇಲ್ಲಿನ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನಲ್ಲಿ, ಸಿಮೆಂಟ್‌ ಕಂಬಗಳನ್ನು ಸಾಗಣೆ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ