Breaking News

ಎಲ್‌ಇಡಿ ಬಲ್ಬ್‌ ನುಂಗಿದ ಎಂಟು ತಿಂಗಳ ಕಂದಮ್ಮ

Spread the love

ಮಡಿಕೇರಿ: ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್  ನುಂಗಿದ ಘಟನೆ ಕೊಡಗು  ಜಿಲ್ಲೆಯ ಮಡಿಕೇರಿ ನಗರದಲ್ಲಿ ನಡೆದಿದೆ.

ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಶುರುಮಾಡಿದ್ದು, ಗಾಬರಿಗೊಂಡ ಪೋಷಕರು ಕಾರಣ ತಿಳಿಯದೇ ಕೂಡಲೇ ಮಡಿಕೇರಿ ನಗರದ ಆಸ್ಪತ್ರೆಗೆ ಕರೆತಂದಿದ್ದಾರೆ. 

ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ಎಕ್ಸ್‌ರೇ ತೆಗೆಸಿ ನೋಡಿದಾಗ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ ವಸ್ತು ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ಆರಂಭದಲ್ಲಿ ಪಿನ್ ನುಂಗಿರಬಹುದೆಂದು ಶಂಕಿಸಲಾಗಿತ್ತು. ನಂತರ ಲ್ಯಾರಿಂಗೊಸ್ಕೋಪ್ ಪರೀಕ್ಷೆ ನಡೆಸಿದಾಗ ಮಗುವಿನ ಗಂಟಲಲ್ಲಿ ಎಲ್‌ಇಡಿ ಬಲ್ಬ್ ಸಿಲುಕಿರುವುದು ಬೆಳಕಿಗೆ ಬಂದಿದೆ. ಕೂಡಲೇ ಇಎನ್‌ಟಿ ತಜ್ಞೆ ಡಾ. ರಾಜಶ್ರಿ ಹಾಗೂ ಮಕ್ಕಳ ತಜ್ಞ ಡಾ. ಖುಶ್ವಂತ್ ಅವರ ತಂಡ ಶಸ್ತ್ರಚಿಕಿತ್ಸೆ ನಡೆಸದೇ ಸುರಕ್ಷಿತವಾಗಿ ಬಲ್ಬ್ ಅನ್ನು ಹೊರತೆಗೆದಿದ್ದಾರೆ.

ಆಟವಾಡುವ ಸಂದರ್ಭದಲ್ಲೇ ಮಗು ಬಲ್ಬ್ ನುಂಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದ್ದು, ಸದ್ಯ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಮಗುವಿನ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಸಮಯೋಚಿತ ಚಿಕಿತ್ಸೆ ಹಾಗೂ ಪೋಷಕರ ತಕ್ಷಣದ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ.


Spread the love

About Laxminews 24x7

Check Also

ತಡವಾಗಿ ಹೋಗಿದ್ದೇ ಹಿಂದಿನ ಸಾಲಲ್ಲಿ ಕೂರಲು ಕಾರಣ: ಸಿದ್ದರಾಮಯ್ಯ ಸ್ಪಷ್ಟನೆ

Spread the loveಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ  ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ