Breaking News

ಪಾಲಿಕೆಯಲ್ಲಿ ಕರ್ನಾಟಕ ಪರ ಗೋತ್ತುವಳಿ ಮಂಡನೆಗೆ ಆಗ್ರಹಿಸಿ 101 ಈಡುಗಾಯಿ ಒಡೆದು ಪ್ರತಿಭಟನೆ

Spread the love

ಬೆಳಗಾವಿ: ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ಆಗ್ರಹಿಸಿ ಕಳೆದ ನೂರು ದಿನಗಳಿಂದ ನಡೆದ ಕನ್ನಡ ಸಂಘಟನೆಗಳ ಹೋರಾಟ ಶುಕ್ರವಾರ ವಿಘ್ನೇಶ್ವರನನ್ನೂ ತಲುಪಿದೆ.

ಕಳೆದ ಮಾರ್ಚ 26 ರಿಂದ ಆರಂಭವಾದ ಈ ಹೋರಾಟಕ್ಕೆ ಜೂನ್ 26 ರಂದು ನೂರು ದಿನಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ಕನ್ನಡ ಸಂಘಟನೆಗಳ ಮುಖಂಡರು ಶುಕ್ರವಾರ ಮುಂಜಾನೆ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ 101 ಈಡುಗಾಯಿಗಳನ್ನು ಒಡೆಯುವ ಮೂಲಕ ಬೆಳಗಾವಿ ಪಾಲಿಕೆಯ ಮಹಾಪೌರರು ಮತ್ತು ಉಪ ಮಹಾಪೌರರಿಗೆ ಸದ್ಬುದ್ಧಿ ಕೊಡುವಂತೆ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಗಡಿವಿವಾದ ಪರಿಹಾರಕ್ಕೆ ಮಹಾಜನ ವರದಿಯೇ ಅಂತಿಮ ಎಂಬ ಗೊತ್ತುವಳಿ ಅಂಗೀಕರಿಸುವವರೆಗೆ ಕನ್ನಡ ಸಂಘಟನೆಗಳ ಹೋರಾಟ ನಿಲ್ಲುವುದಿಲ್ಲ.

ಈಗಲಾದರೂ ಬಿಜೆಪಿ ನಾಯಕರು ಗಡಿಭಾಗದ ಹಾಗೂ ನಾಡಿನ ಕನ್ನಡಿಗರ ಭಾವನೆಗಳನ್ನು ಅರ್ಥ ಮಾಡಿಕೊಂಡು ಗೊತ್ತುವಳಿ ಅಂಗೀಕರಿಸಬೇಕೆಂದು ಆಗ್ರಹಿಸಿದರು.


Spread the love

About Laxminews 24x7

Check Also

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Spread the loveಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ