Breaking News

ಹಣ್ಣಿಗಾಗಿ ಸುತ್ತುವರಿದ ಕೋತಿಗಳು – ಹೆದರಿ ಬೆಟ್ಟದಿಂದ ಕಾಲುಜಾರಿ ಬಿದ್ದು ಮಹಿಳೆ ಸಾವು

Spread the love

ಚೆನ್ನೈ: ಹಣ್ಣಿಗಾಗಿ ಮುತ್ತಿಗೆ ಹಾಕಿದ ಕೋತಿಗಳಿಗೆ ಹೆದರಿ ನವವಿವಾಹಿತ ಮಹಿಳೆಯೊಬ್ಬರು ಬೆಟ್ಟದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ  ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ.

ತೂತುಕುಡಿಯ ದಕ್ಷಿಣ ತಿಟ್ಟಂಕುಳಂ ಪ್ರದೇಶದ ಅನಿತಾ ಮೃತ ದುರ್ದೈವಿ. ಕಳೆದ ತಿಂಗಳಷ್ಟೇ 29 ವರ್ಷದ ಸುರೇಶ್ ಅವರನ್ನು ವಿವಾಹವಾಗಿದ್ದರು. ವಿದೇಶದಲ್ಲಿ ಕೆಲಸ ಮಾಡುತ್ತಿರುವ ಸುರೇಶ್ ಇತ್ತೀಚೆಗೆ ಮನೆಗೆ ಮರಳಿದ್ದರು. ದಂಪತಿ ಪೂಜೆ ಸಲ್ಲಿಸಲು ಕಜುಗುಮಲೈನಲ್ಲಿರುವ ಕಲುಗಸಲಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಮುಖ್ಯ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ, ದಂಪತಿ ಬೆಟ್ಟದ ತುದಿಯಲ್ಲಿರುವ ಉಚಿಪಿಳ್ಳಯಾರ್ ದೇವಾಲಯಕ್ಕೆ ಹತ್ತಿದರು. ದಂಪತಿ, ಕೋತಿಗಳಿಗೆ ಹಣ್ಣುಗಳನ್ನು ನೀಡಲು ಮುಂದಾದರು. ಈ ವೇಳೆ, ಹಲವು ಕೋತಿಗಳು ಇದ್ದಕ್ಕಿದ್ದಂತೆ ಅವರನ್ನು ಸುತ್ತುವರಿದಿವೆ. ಕೋತಿಗಳಿಗೆ ಹೆದರಿ ಮಹಿಳೆ ಬೆಟ್ಟದ ತುದಿಯಿಂದ ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

ಕಜುಗುಮಲೈನ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ, ಪೊಲೀಸರೊಂದಿಗೆ ಸೇರಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Spread the loveಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ