Breaking News

ಕಾರಲ್ಲೇ ಪ್ರೇಮಿಗಳ ಗಲಾಟೆ – ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆ

Spread the love

ತುಮಕೂರು: ಪ್ರೇಮಿಗಳ ನಡುವೆ ಕಾರಲ್ಲೇ ಗಲಾಟೆ ನಡೆದು, ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.

ನಾಗೇಂದ್ರ (30) ಸಜೀವ ದಹನವಾದ ವ್ಯಕ್ತಿ. ತುಮಕೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡಿದ್ದಾನೆ. ಇದರಿಂದ ಸ್ಥಳದಲ್ಲೇ ಆತ ಸಾವಿಗೀಡಾಗಿದ್ದಾನೆ. ಇದಕ್ಕೂ ಮುನ್ನ, ಕಾರಿನಲ್ಲಿದ್ದ ಯುವತಿ ತಲೆಗೆ ನಾಗೇಂದ್ರ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಆಕೆಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರು ಕಾರಿನಲ್ಲಿ ಬೆಂಗಳೂರಿನಿಂದ ಅಂಕೋಲಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಮೊದಲೇ ಪೆಟ್ರೋಲ್‌ ಬಾಂಬ್‌ ತಂದಿದ್ದ ನಾಗೇಂದ್ರ
ನಾಗೇಂದ್ರ ಬಾಡಿಗೆ ಕಾರು ಮಾಡಿಕೊಂಡು, ಮೊದಲೇ ಪ್ಲ್ಯಾನ್‌ ಮಾಡಿ ಪೆಟ್ರೋಲ್ ಬಾಂಬ್ ತೆಗೆದುಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ. ಯುವಕ – ಯುವತಿ ಪ್ರೇಮಿಗಳಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Spread the loveಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ