Breaking News

ಮದ್ವೆಗೆ ಒಪ್ಪದೇ ಅವಾಯ್ಡ್‌ ಮಾಡ್ತಿದ್ದ ಪ್ರೇಯಸಿ – ಊಟಕ್ಕೆ ಕರೆದು ಕತ್ತುಕೊಯ್ದು ಕೊಂದ ಪ್ರಿಯಕರ

Spread the love

ಬೆಂಗಳೂರು: ಮನೆಯಲ್ಲಿ ಪ್ರೀತಿ ವಿಚಾರ ತಿಳಿದಿದ್ದರೂ ಮದುವೆಗೆ ಒಪ್ಪದೇ ಅವಾಯ್ಡ್‌ ಮಾಡುತ್ತಿದ್ದ ಪ್ರೇಯಸಿಯನ್ನು, ಪ್ರಿಯಕರನೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪೈಪ್‌ಲೈನ್‌ ರಸ್ತೆಯಲ್ಲಿ ನಡೆದಿದೆ.

ಭಾನುವಾರ (ಜೂ.28) ರಾತ್ರಿ 9:30 ರ ಸುಮಾರಿಗೆ ಘಟನೆ ನಡೆದಿದೆ. ಅಂಜಲಿ (23) ಕೊಲೆಯಾದ ಯುವತಿ. ರಾಜೀವ್ ಪ್ರೇಯಸಿಯನ್ನ ಕೊಂದ ಪ್ರಿಯಕರ.
ಪ್ರೇಯಸಿಯನ್ನ ಊಟಕ್ಕೆ ಕರೆದಿದ್ದ ಪ್ರಿಯಕರ, ಮದುವೆ ವಿಚಾರ ಪ್ರಸ್ತಾಪಿಸಿ ಗಲಾಟೆ ಮಾಡಿದ್ದಾನೆ. ಈ ವೇಳೆ ಕೋಪಕೊಂಡು ಕತ್ತುಕೊಯ್ದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಅಂಜಲಿ ಮತ್ತು ರಾಜೀವ್‌ ಕಳೆದ ಮೂರ್ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಹಿಂದೆ ಕೆಲಸ ಮಾಡುತ್ತಿದ್ದ ಜಾಗದಲ್ಲಿ ಪರಿಚಯವಾಗಿ, ಬಳಿಕ ಪ್ರೇಮಾಂಕುರವಾಗಿತ್ತು. ಈ ವಿಚಾರ ಎರಡೂ ಮನೆಯವರಿಗೆ ತಿಳಿದಿತ್ತು. ರಾಜೀವ್‌ಗೆ ಕ್ರಿಮಿನಲ್‌ ಹಿನ್ನೆಲೆ ಇದ್ದ ಕಾರಣ, ಅಂಜಲಿ ಕುಟುಂಬಸ್ಥರು ಮದುವೆಗೆ ಒಪ್ಪಿರಲಿಲ್ಲ.

ಹಲವು ಬಾರಿ ಮದುವೆಗೆ ಒಪ್ಪಿಸಲು ಆಗದೇ ರಾಜೀವ್‌ ರೋಸಿಹೋಗಿದ್ದ. ಇತ್ತೀಚೆಗೆ ಅಂಜಲಿ ಕೂಡ ಪೋಷಕರ ಒತ್ತಾಯಕ್ಕೆ ಮಣಿದಿದ್ದಳು, ಜೊತೆಗೆ ರಾಜೀವ್‌ನನ್ನ ಅವಾಯ್ಡ್‌ ಮಾಡೋದಕ್ಕೂ ಶುರು ಮಾಡಿದ್ದಳು.

ಭಾನುವಾರ ಸಂಜೆ ರಾಜೀವ್‌, ಪ್ರೇಯಸಿ ಅಂಜಲಿಯನ್ನ ಊಟಕ್ಕೆ ಕರೆದುಕೊಂಡು ಬಂದಿದ್ದ. ಈ ವೇಳೆ ಮತ್ತೆ ಮದುವೆ ಪ್ರಸ್ತಾಪ ಮಾಡಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಮತ್ತೆ ಗಲಾಟೆ ಶುರುವಾಗಿದೆ. ಕೊನೆಗೆ ಕೋಪಗೊಂಡ ರಾಜೀವ್‌, ಪೈಪ್ ಲೈನ್ ರಸ್ತೆಗೆ ಕರೆದುಕೊಂಡು ಬಂದು ಅಂಜಲಿಯ ಕತ್ತುಕೊಯ್ದು ಕೊಲೆ ಮಾಡಿದ್ದಾನೆ.

ನೆರವಿಗೆ ಧಾವಿಸಿದ ಸ್ಥಳೀಯರು ತಕ್ಷಣ ಅಂಜಲಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದಾಗ್ಯೂ ಚಿಕಿತ್ಸೆ ಫಲಕಾರಿಯಾಗದೇ ಅಂಜಲಿ ಸಾವನ್ನಪ್ಪಿದ್ದಾಳೆ. ವಿಚಾರ ಗೊತ್ತಾದ ಬಳಿಕ ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಅಖಲಿಸಿಕೊಂಡು ಕೆಲವೇ ನಿಮಿಷಗಳಲ್ಲಿ ಆರೋಪಿಯನ್ನ ಬಂಧಿಸಿದ್ದಾರೆ.

ಸದ್ಯ ಕೊಲೆಯಾದ ಅಂಜಲಿ ಮೃತದೇಹದವನ್ನ ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ