Breaking News

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್ – ಬಸ್‌ಪಾಸ್ ಶುಲ್ಕ ಮರುಪಾವತಿ; ಜೂ.29 ರಿಂದ ಅರ್ಜಿ ಪ್ರಕ್ರಿಯೆ ಶುರು

Spread the love

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ?
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. ಈಗಾಗಲೇ ಪಾವತಿಸಿಕೊಂಡಿರುವ ಬಸ್ ಪಾಸ್ ಶುಲ್ಕವನ್ನ ಮರುಪಾವತಿ ಮಾಡಲು 4 ಸಾರಿಗೆ ನಿಗಮಗಳಿಗೆ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿತ್ತು. ಆದಾಗ್ಯೂ ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಸಾರಿಗೆ ನಿಗಮಗಳು ನಿಯಮಾನುಸಾರ ವಿದ್ಯಾರ್ಥಿಗಳಿಂದ ಪಡೆದುಕೊಂಡಿದ್ದ ಶುಲ್ಕವನ್ನ ವಿದ್ಯಾರ್ಥಿಗಳಿಗೆ ಹಿಂದಿರುಗಿಸಲು ಆದೇಶಿಲಾಗಿದೆ.

ಕೆಎಸ್ಆರ್‌ಸಿಟಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳು ಜಂಟಿಯಾಗಿ ಹಣ ಮರುಪಾವತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಜೂನ್ 29ರಿಂದ ಅವಕಾಶ ಕಲ್ಪಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ‘ಸೇವಾಸಿಂಧು’ ಪೋರ್ಟಲ್ ಮೂಲಕವೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಒಟಿಪಿ ಮೂಲಕ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದರೊಂದಿಗೆ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯ ನಿಖರವಾದ ವಿವರಗಳನ್ನು ಸಲ್ಲಿಕೆ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ, NEFT ಅಥವಾ RTGS ವಿಧಾನದ ಮುಖಾಂತರ ಕೇವಲ 7 ದಿನದ ಒಳಗೆ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.

 

 


Spread the love

About Laxminews 24x7

Check Also

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Spread the loveಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ