Breaking News

ಹೊತ್ತಿ ಉರಿದ ನಂದಿನಿ ಮಿಲ್ಕ್ ಪಾರ್ಲರ್‌ – ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ

Spread the love

ಚಿಕ್ಕಬಳ್ಳಾಪುರ: ನಗರದ  ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ  ಸಂಭವಿಸಿದೆ. ಈ ಆಘಾತದಿಂದ ಮಾಲೀಕ ಅಂಗಡಿ ಮುಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಣಜೇನಹಳ್ಳಿ ಗ್ರಾಮದ ವೆಂಕಟೇಶ್ (55) ಮೃತ ದುರ್ದೈವಿ. ಸೋಮವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮಿಲ್ಕ್ ಪಾರ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ವೆಂಕಟೇಶ್ ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸಿದ್ದಾರೆ.

ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ವೆಂಕಟೇಶ್, ಬೆಂಕಿ ನಂದಿಸಿದ ಕೆಲವೇ ಕ್ಷಣಗಳಲ್ಲಿ ಅಂಗಡಿ ಮುಂಭಾಗದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸ್ಥಳೀಯರು ಯತ್ನಿಸಿದ್ದರು. ಆದರೆ ಹೃದಯಾಘಾತದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವೆಂಕಟೇಶ್ ಅವರು ಹಲವು ವರ್ಷಗಳಿಂದ ಇದೇ ನಂದಿನಿ ಮಿಲ್ಕ್ ಪಾರ್ಲರ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಹಠಾತ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.


Spread the love

About Laxminews 24x7

Check Also

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Spread the loveಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ