Breaking News

ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್‌

Spread the love

ಬೆಂಗಳೂರು: ಪತಿಗಿಂತ  ಹೆಚ್ಚು ದುಡಿಯುವ ಪತ್ನಿಗೆ  ಜೀವನಾಂಶ ನೀಡಬೇಕಿಲ್ಲ ಎಂದು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ ಹೈಕೋರ್ಟ್  ಏಕಸದಸ್ಯ ಪೀಠ ಆದೇಶ ನೀಡಿದೆ.

2024 ರಲ್ಲಿ ವಿವಾಹವಾಗಿದ್ದ ದಂಪತಿ ಕೆಲ ತಿಂಗಳಲ್ಲೇ ಪ್ರತ್ಯೇಕವಾಗಿದ್ದರು. ಜೀವನಾಂಶ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಪತ್ನಿ ಅರ್ಜಿ ಸಲ್ಲಿಸಿದ್ರು. ಪತಿಗೆ 60,646 ರೂ. ಸಂಬಳವಿದ್ದರೆ ಪತ್ನಿಗೆ 1 ಲಕ್ಷ ಮಾಸಿಕ ಸಂಬಳವಿತ್ತು. ವಿಚಾರಣಾ ನ್ಯಾಯಾಲಯ ಪತಿಗೆ 20,000 ರೂ. ಜೀವನಾಂಶ ನೀಡುವಂತೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪತಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಕೋರ್ಟ್ ಪತಿಯ ಮೇಲ್ಮನವಿ ಅರ್ಜಿಯನ್ನು ಪುರಸ್ಕರಿಸಿತು. 1 ಲಕ್ಷ ರೂ. ಸಂಬಳದಲ್ಲಿ ಪತ್ನಿ ತನ್ನ ನಿರ್ವಹಣೆಯನ್ನು ಮಾಡಿಕೊಳ್ಳಬಹುದು. ಪತಿಯ ಸಂಬಳವೇ ಪತ್ನಿಯಗಿಂತ ಕಡಿಮೆಯಿದ್ದಾಗ ಪತಿ ಜೀವನಾಂಶ ನೀಡಲು ಬಾದ್ಯಸ್ಥನಲ್ಲ ಎಂದು ಹೈಕೋರ್ಟ್ ತಿಳಿಸಿತು. ಅಲ್ಲದೆ ಪತ್ನಿಗೆ ಮಕ್ಕಳು ಅಥವಾ ಇತರ ಬಾದ್ಯತೆಗಳಿಲ್ಲದಿರುವುದನ್ನು ಗಣನೆಗೆ ತೆಗೆದುಕೊಂಡು ಜೀವನಾಂಶ ನೀಡುವಂತೆ ಸೂಚಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿತು.


Spread the love

About Laxminews 24x7

Check Also

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Spread the loveಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ