ಬೆಂಗಳೂರು): ಕೊರೋನಾ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಮತ್ತು ಕೋವಿಡ್-19 ಚಿಕಿತ್ಸಾ ಸಲಕರಣೆ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಸೇರಿದಂತೆ ರಾಜ್ಯಾದ್ಯಂತ ಸೋಂಕಿತರ ಪರದಾಟ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಹಿರಿಯ ಮುಖಂಡರು, ಕಾಂಗ್ರೆಸ್ ಕೋವಿಡ್ ಕಾರ್ಯಪಡೆ ಹಾಗೂ ವೈದ್ಯ ಘಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಹಾಗೆಯೇ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಚ್.ಕೆ ಪಾಟೀಲ್ ಹಾಗೂ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಉಪಸ್ಥಿತರಿದ್ದರು.
ಸಭೆಯ ನಂತರ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋವಿಡ್-19 ಸೋಂಕಿತರು ಬಳಸಿದ ಹಾಸಿಗೆಗಳನ್ನು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇದರ ವಿರುದ್ಧ ಆಂದೋಲನ ಆರಂಭಿಸುವುದಾಗಿ ಹೇಳಿದರು.