Breaking News

ಮನೆಗೆ ಬಂದು ನಡೆಯಲಿದೆ ಪರಿಶೀಲನೆ – ಮಾಲೀಕರು ಏನು ದಾಖಲೆ ಕೊಡಬೇಕು?

Spread the love

ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ  ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ.

2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್‌ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ.

ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಆಧಾರ್ ಕಾರ್ಡ್, ಫಲಾನುಭವಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ) , ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ವನ್ನು ತೋರಿಸಲು ಕೋರಲಾಗಿದೆ.

ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ.

ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ