Breaking News

ವಿವಾಹಿತೆಯನ್ನು ಓಡಿಸಿಕೊಂಡು ಹೋಗಿದ್ದಕ್ಕಾಗಿ ಮನೆ ಧ್ವಂಸ ಪ್ರಕರಣ: 3 ಅರೆಸ್ಟ್

Spread the love

 ಬೆಳಗಾವಿ: ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದ ವಿವಾಹಿತೆಯನ್ನು ಓಡಿಸಿಕೊಂಡು ಹೋದ ಎಂಬ ಕಾರಣಕ್ಕೆ ಯುವಕನ ಮನೆ ಧ್ವಂಸ ಮಾಡಿದ್ದ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ವಿವಾಹಿತೆ ನಾಗವ್ವ ಎಂಬಾಕೆಯನ್ನು  ಓಡಿಸಿಕೊಂಡು ಹೋಗಿದ್ದ ಯಲ್ಲಪ್ಪ ನಾಯಕ್ ಮನೆ ಮೇಲೆ ದಾಳಿ ಮಾಡಿ ಮನೆ ಧ್ವಂಸ ಮಾಡಿದ ಪ್ರಕರಣದಲ್ಲಿ  ಪ್ರಮುಖ ಆರೋಪಿಗಳಾದ ನಾಗರಾಜ್ ನಾಯಕ, ರವಿ ಬೀಜಗತ್ತಿ, ಈಶ್ವರ ಮುಚ್ಚಂಡಿ ಎಂಬುವರನ್ನು ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರಿಂದ ಬಂಧಿಸಲಾಗಿದೆ.

ಮೂರು ಆರೋಪಿ ಸೇರಿ ಹಲವರ ವಿರುದ್ಧ ಯಲ್ಲಪ್ಪ ತಂದೆಯಿಂದ ದೂರು ನೀಡಿದರು. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳ ಬಂಧಿಸಲಾಗಿದೆ. ಮೂವರು ಆರೋಪಿಗಳು ನಾಗವ್ವ ಮತ್ತು ಪತಿ ಬಸಪ್ಪ ಸಂಬಂಧಿಕರು ಎಂಬುವುದು ದೃಢವಾಗಿದೆ. ಇನ್ನು ಪ್ರಕರಣದ ಬಗ್ಗೆ ತನಿಖೆ ಮುಂದುವರೆದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ