ಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು
ಅವರು ರಾಜ್ಯಾದ್ಯಂತ ಜುಲೈ ೨೯ರವರೆಗೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಮನೆ-ಮನೆ ಸಮೀಕ್ಷೆ ಮಂಗಳವಾರ ಆರಂಭಗೊAಡಿದ್ದು ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಅವರು ತಮ್ಮ ನಿವಾಸದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ (SIR) ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಸಲ್ಲಿಸಿ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾತನಾಡಿದ ಅವರ ಮತಕ್ಷೇತ್ರದ ಪ್ರತಿಯೊಂದು ಮನೆಗೂ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳು ನಿಖರವಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ ಅವರು “ಇದು ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಪ್ರಕ್ರಿಯೆ. ಪ್ರಜಾಪ್ರಭುತ್ವದ ಸುಭದ್ರ ಅಡಿಪಾಯ ಮತದಾನವಾಗಿದ್ದು, ಮತದಾನದ ಹಕ್ಕು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಅತ್ಯಗತ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಧಿಕಾರಿಗಳಾದ ನಾಗರಾಜ ಕುಲಕರ್ಣೀ, ಗಾಡದ, ಬಿಜೆಪಿ ಪಕ್ಷದ ಬಿಎಲ್ ೧ ಮಲ್ಲು ಮುತ್ತಪ್ಪನವರ, ಬಿಎಲ್‌ಎ ೨ ಮಲ್ಲು ಕಾಂಬಳೆ, ಶರತ ಪಾಟೀಲ, ಸರಸ್ವತಿ ಕುರಬರ, ಮುತ್ತಣ್ಣ ಕುರಬರ, ಶರತ ಪಾಟೀಲ. ಸೇರಿದಂತೆ ಅನೇಕರು ಇದ್ದರು.
ಪೋಟೋ ೦೧ ಎಸ್‌ಐಆರ್ ಅಭಿಯಾನದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಅವರ ನಿವಾಸದಲ್ಲಿ ಅಧಿಕಾರಿಗಳು ಗಣತಿ ನಮೂನೆ(ಎನ್ಯೂಮರೇಷನ ಫಾರಂ) ನೀಡಿದರು.
Laxmi News 24×7