Breaking News

ಕಾರಹುಣ್ಣಿಮೆ ಮುಂಗಾರು ಹಬ್ಬ: ಭಾರದ ಕಲ್ಲು ಎಳೆದು ಎತ್ತುಗಳ ಶಕ್ತಿ ಪ್ರದರ್ಶನ

Spread the love

ರಾಯಚೂರು: ಕಾರಹುಣ್ಣಿಮೆ ಹಿನ್ನೆಲೆ ರಾಯಚೂರು ಜಿಲ್ಲೆಯ ಹಲವೆಡೆ ಮುಂಗಾರು ಸಾಂಸ್ಕೃತಿಕ ಹಬ್ಬವನ್ನ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ರಾಯಚೂರು ತಾಲೂಕಿನ ಆಶಾಪೂರ ಗ್ರಾಮದಲ್ಲಿ ಎತ್ತುಗಳಿಗೆ ಭಾರದ ಕಲ್ಲು ಎಳೆಯುವ ಸ್ಪರ್ಧೆ ಆಯೋಜಿಸಲಾಗಿತ್ತು.

ರಾಯಚೂರಿನ ಮಂಗಳವಾರಪೇಟೆ ಹಿರೇಮಠದ ಪೀಠಾಧಿಪತಿ ವೀರ ಸಂಗಮೇಶ್ವರ ಶಿವಾಚಾರ್ಯ ಸ್ವಾಮಿ ಮುಂಗಾರು ಹಬ್ಬಕ್ಕೆ ಚಾಲನೆ ನೀಡಿದರು. ಹೊರಜಿಲ್ಲೆಗಳಿಂದ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ 15 ಜೋಡಿ‌ ಎತ್ತುಗಳು ಒಂದು ಟನ್ ಕಲ್ಲನ್ನ ಎಳೆದು ತಮ್ಮ ಸಾಮರ್ಥ್ಯ ಪ್ರದರ್ಶಿಸಿದವು.

ಗ್ರಾಮದಲ್ಲಿ ಸತತ 20 ವರ್ಷಗಳಿಂದ ಮುಂಗಾರು ಹಬ್ಬವನ್ನ ಆಚರಿಸಿಕೊಂಡು ಬಂದಿದ್ದು, ಈ ಭಾರಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಭಾರದ ಕಲ್ಲು ಎಳೆಯುವ ಸ್ಪರ್ಧೆಯಲ್ಲಿ ಬಹುಮಾನ ಗೆದ್ದ ಎತ್ತುಗಳ ಮಾಲೀಕರಿಗೆ ಸನ್ಮಾನಿಸಲಾಯಿತು. ಸುತ್ತಮುತ್ತಲಿನ ಗ್ರಾಮಗಳ ರೈತರು ಮುಂಗಾರು ಹಬ್ಬದಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಈ ಭಾರಿ ಮುಂಗಾರು ಉತ್ತಮವಾಗಿರಲಿ ಅಂತ ದೇವರಲ್ಲಿ ಪ್ರಾರ್ಥಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ