Breaking News

ಕ ರೋನಾ ಇದೆ ಎಂದು ಹಂಗಿಸಿದಕ್ಕೆ ಆತ್ಮ ಹತ್ಯೆ ಮಾಡಿಕೊಂಡ ಸೋಂಕಿತ..

Spread the love

ಬೆಂಗಳೂರು: ಕೊರೊನಾ ಸೋಂಕಿತರನ್ನು ಜನರು ಅವಮಾನಿಸುತ್ತಿದ್ದು, ಇದರಿಂದ ನೊಂದ ಸೋಂಕಿತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಸಮಾಜ ಎಷ್ಟೇ ಬದಲಾಗಿದ್ದರೂ ವಿದ್ಯಾವಂತರು ಹೆಚ್ಚಿದ್ದರೂ ಕೂಡ ಜನರ ಮನ:ಸ್ಥಿತಿ ಮಾತ್ರ ಇನ್ನೂ ಬದಲಾಗುತ್ತಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತ್ನಿ ಮತ್ತು ಮಗನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಕೀಲಾಗಿ ನೋಡುತ್ತಿದ್ದುದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಸರುಘಟ್ಟದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ನಿವಾಸಿ ನಾಗರಾಜು (56) ಮೃತ ವ್ಯಕ್ತಿ. ಹೆಸರುಘಟ್ಟ ಕೆರೆಯ ಬಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ನಾಗರಾಜು ಮಗನಿಗೆ ಮೊದಲು ಪಾಸಿಟಿವ್ ಬಂದಿತ್ತು. ನಂತರ ಪತ್ನಿಗೂ ಸೋಂಕಿನ ಲಕ್ಷಣ ಕಂಡುಬಂದಿದ್ದರಿಂದ ಕೊರೊನಾ ಟೆಸ್ಟ್ ಮಾಡಿಸಿದ್ದು, ಆಕೆಗೂ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಪೊಲೀಸರು ಅವರು ವಾಸವಿದ್ದ ಏರಿಯಾವನ್ನು ಸೀಲ್‍ಡೌನ್ ಮಾಡಿ ಔಷಧ ಸಿಂಪಡಣೆ ಮಾಡಿದ್ದಾರೆ.

ಸೀಲ್‍ಡೌನ್ ಆಗುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಮೃತ ನಾಗರಾಜ್ ಕುಟುಂಬಸ್ಥರನ್ನು ಅವಮಾನಿಸಿದ್ದರು. ನಿಮ್ಮಿಂದ ಏರಿಯಾದ ಜನರೇ ಸಮಸ್ಯೆ ಎದುರಿಸುವಂತಾಗಿದೆ ಎಂದು ಗಲಾಟೆ ಮಾಡಿದ್ದಾರೆ. ಇದರಿಂದ ಬೇಸತ್ತ ನಾಗರಾಜ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ