Breaking News

ವಾಟ್ಸಪ್‌ ಹೊಸ ಅಪ್‌ಡೇಟ್‌ ಬಗ್ಗೆ ಕಳವಳ – ಮೆಟಾಗೆ ಕೇಂದ್ರ ಸರ್ಕಾರ ನೋಟಿಸ್

Spread the love

ನವದೆಹಲಿ: ಮೊಬೈಲ್ ಸಂಖ್ಯೆ ಹಂಚಿಕೊಳ್ಳದೇ ಯೂಸರ್‌ನೇಮ್ ಮೂಲಕ ಸಂಪರ್ಕ ಸಾಧಿಸಲು ಅವಕಾಶ ಕಲ್ಪಿಸುವ ವಾಟ್ಸಪ್‌ನ ಹೊಸ ವೈಶಿಷ್ಟ್ಯದ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಈ ವೈಶಿಷ್ಟ್ಯವನ್ನು ಪರಿಚಯಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮೆಟಾಗೆ ನೋಟಿಸ್‌ ಜಾರಿಗೊಳಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ವಾಟ್ಸಪ್‌ನ ಹೊಸ ವೈಶಿಷ್ಟ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ? ಯಾವ ಸುರಕ್ಷತಾ ಕ್ರಮಗಳನ್ನ ಒಳಗೊಂಡಿದೆ? ಎಂಬುದರ ಕುರಿತು 3 ದಿನಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಮೆಸೇಜಿಂಗ್ ಆ್ಯಪ್ ವಾಟ್ಸಪ್  ಬಳಕೆದಾರರ ಗೌಪ್ಯತೆ ಮತ್ತಷ್ಟು ಬಲಪಡಿಸಲು ಹೊಸ ವೈಶಿಷ್ಟ್ಯತೆಯನ್ನು ವಿನ್ಯಾಸಗೊಳಿಸಿರುವುದಾಗಿ ಮೆಟಾ ಹೇಳಿಕೊಂಡಿದೆ. ಆದಾಗ್ಯೂ ಕೇಂದ್ರ ಸರ್ಕಾರ ಇದರ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಈ ಹೊಸ ವ್ಯವಸ್ಥೆಯು ನಕಲಿ ಖಾತೆಗಳನ್ನ  ಸೃಷ್ಟಿಸುವುದು, ಪ್ರಸಿದ್ಧ ವ್ಯಕ್ತಿಗಳ ಹೆಸರಿನಲ್ಲಿ ವಂಚನೆ ನಡೆಸುವುದು ಹಾಗೂ ಸೈಬರ್ ಅಪರಾಧಗಳಿಗೆ ಅವಕಾಶ ಹೆಚ್ಚುವ ಸಾಧ್ಯತೆ ಇದೆ. ಯೂಸರ್‌ನೇಮ್  ವ್ಯವಸ್ಥೆ ಜಾರಿಯಾದರೆ ಯಾರಾದರೂ ಮತ್ತೊಬ್ಬರ ಹೆಸರಿನಂತೆಯೇ ಕಾಣುವ ಖಾತೆಗಳನ್ನು ಸೃಷ್ಟಿಸಿ ಸಾರ್ವಜನಿಕರನ್ನ ದಾರಿ ತಪ್ಪಿಸುವ ಸಾಧ್ಯತೆ ಇದೆ. ಇದರಿಂದ ಗುರುತಿನ ಕಳವು, ಹಣಕಾಸು ವಂಚನೆ ಹಾಗೂ ಸೈಬರ್ ಮೋಸ ಪ್ರಕರಣಗಳು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಕೇಂದ್ರ ಸರ್ಕಾರವು ಈ ವೈಶಿಷ್ಟ್ಯದಿಂದ ಬಳಕೆದಾರರ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ