Breaking News

ಗಾಂಜಾ ಮಾರಾಟಕ್ಕೆ ವಿರೋಧ – ತಲೆ ಮೇಲೆ ಕಲ್ಲು ಎತ್ತಿಹಾಕಿ ಅಜ್ಜಿಯನ್ನೇ ಕೊಂದ ಮೊಮ್ಮಗ

Spread the love

ಶಿವಮೊಗ್ಗ: ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ ಅಜ್ಜಿಯ ಮೇಲೆ ಮೊಮ್ಮಗ ಹಲ್ಲೆ ಮಾಡಿ, ತಲೆ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ನಗರದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯ ತಖ್ವಾ ಮಸೀದಿ ಎದುರಿನ ರಸ್ತೆಯಲ್ಲಿಯೇ ಈ ಭೀಕರ ಘಟನೆ ನಡೆದಿದ್ದು, ಕಿಶೋರ್ (26) ಎಂಬ ಯುವಕ ಈ ಕೃತ್ಯವನ್ನು ಎಸೆಗಿದ್ದಾನೆ. ಸುಶೀಲಮ್ಮ (55) ಕೊಲೆಯಾದ ವೃದ್ಧೆ.

ಕೊಲೆ ಆರೋಪಿ ಕಿಶೋರ್ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಇದಕ್ಕೆ ವಿರೋಧ ಮಾಡುತ್ತಿದ್ದ ಅಜ್ಜಿ ಸುಶೀಲಮ್ಮ ಮೇಲೆ ಗಾಂಜಾ ನಶೆಯಲ್ಲಿ ಸದಾ ಗಲಾಟೆ ಮಾಡುತ್ತಿದ್ದ. ಇಂದು ಸಂಜೆ ಕೂಡ ಗಾಂಜಾ ನಶೆಯಲ್ಲಿ ಅಜ್ಜಿ ಸುಶೀಲಮ್ಮ ಜೊತೆ ಗಲಾಟೆ ಮಾಡಿದ್ದಾನೆ. ಬಳಿಕ ಪೊಲೀಸರಿಗೆ ದೂರು ಕೊಡಲು ಮನೆಯಿಂದ ಅನತಿ ದೂರದಲ್ಲಿ ಸುಶೀಲಮ್ಮ ನಡೆದುಕೊಂಡು ಹೋಗುವಾಗ ಹಿಂಬದಿಯಿಂದ ತಳ್ಳಿದ ಕಿಶೋರ್, ಸುಶೀಲಮ್ಮ ಕೆಳಗೆ ಬಿದ್ದಾಗ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ, ಅಲ್ಲಿಂದ ಪರಾರಿಯಾಗಿದ್ದಾನೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಎಸ್ಪಿ ಬಿ.ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಸುಶೀಲಮ್ಮನ ಮೃತದೇಹವನ್ನ ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿದೆ.


Spread the love

About Laxminews 24x7

Check Also

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

Spread the loveನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ