ಮರೆಯದ ಮಾಣಿಕ್ಯ ಡಾ. ಫ.ಗು. ಹಳಕಟ್ಟಿ ಅವರ ಜಯಂತಿ ಆಚರಣೆ
ಬಾಗಲಕೋಟೆ : ಬಿ.ವಿ.ವಿ.ಎಸ್. ಅಕ್ಕನ ಬಳಗ ಹಾಗೂ ಕದಳಿ ಮಹಿಳಾ ವೇದಿಕೆ, ತಾಲೂಕು ಘಟಕ ಬಾಗಲಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಬಸವೇಶ್ವರ ಹೆಣ್ಣುಮಕ್ಕಳ ಮಾಧ್ಯಮಿಕ ಶಾಲೆಯಲ್ಲಿ ವಚನ ಗುಮ್ಮಟ ಡಾ. ಫ.ಗು. ಹಳಕಟ್ಟಿ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಕ್ಕನ ಬಳಗದ ಹಿರಿಯ ಸದಸ್ಯೆ ಕಮಲಾ ರುದ್ರಾಕ್ಷಿ ಅವರು ಅತಿಥಿ ಉಪನ್ಯಾಸ ನೀಡಿ, ಡಾ. ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯವನ್ನು ಸಂಗ್ರಹಿಸಿ ಉಳಿಸುವ ಮೂಲಕ ಕನ್ನಡ ನಾಡು-ನುಡಿಗೆ ಅಪಾರ ಸೇವೆ ಸಲ್ಲಿಸಿದ ಮರೆಯಲಾಗದ ಮಾಣಿಕ್ಯ ಎಂದು ಬಣ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಾಧ್ಯಾಪಕಿ ಶ್ರೀಮತಿ ಎಲ್.ಎಸ್. ಖೋತ ವಹಿಸಿ ಸಮಾರೋಪ ಭಾಷಣ ಮಾಡಿದರು. ಅಕ್ಕನ ಬಳಗದ ಉಪಾಧ್ಯಕ್ಷೆ ಶ್ರೀಮತಿ ವಿಜಯಾ ರೇವಡಿಗಾರ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರ ವಚನ ಗಾಯನದೊಂದಿಗೆ ಕಾರ್ಯಕ್ರಮ ಆರಂಭಗೊAಡಿತು. ಕಾರ್ಯಕ್ರಮವನ್ನು ಶ್ರೀಮತಿ ಪಟ್ಟಣಶೆಟ್ಟಿ ಅವರು ನಿರೂಪಿಸಿದರು. ಶ್ರೀ ನರೇಗಲ್ ಅವರು ಸ್ವಾಗತಿಸಿದರು. ಶ್ರೀಮತಿ ಶಿವಲೀಲಾ ಸಂಬಣ್ಣನವರ ಮಕ್ಕಳಿಗೆ ಸಿಹಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಿಬ್ಬಂದಿ, ವಿದ್ಯಾರ್ಥಿನಿಯರು ಹಾಗೂ ಕದಳಿ ಮಹಿಳಾ ವೇದಿಕೆಯ ಸದಸ್ಯರು ಭಾಗವಹಿಸಿದ್ದರು. ಕೊನೆಯಲ್ಲಿ ಕದಳಿ ಮಹಿಳಾ ವೇದಿಕೆ ಬಾಗಲಕೋಟೆ ಜಿಲ್ಲಾ ಘಟಕದ ಕಾರ್ಯದರ್ಶಿ ಶ್ರೀಮತಿ ವಿಜಯಲಕ್ಷ್ಮಿ ಭದ್ರಶೆಟ್ಟಿ ಅವರು ವಂದಿಸಿದರು.
ಪೋಟೋ ೦೧ ಅಕ್ಕನ ಬಳಗದಲ್ಲಿ ಡಾ. ಫ.ಗು. ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸಲಾಯಿತು.
Laxmi News 24×7