Breaking News

ಪೊಲೀಸ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ

Spread the love

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯನ್ನು ಬಲಪಡಿಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ 2026-27ನೇ ಸಾಲಿನಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವತಿಯಿಂದ ನೇಮಕಾತಿಗಳನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಡಿಟೆಕ್ಟಿವ್ ಸಬ್‌ಇನ್‌ಸ್ಪೆಕ್ಟರ್ ಹುದ್ದೆಗಳ ಸಂಖ್ಯೆ ಕಲ್ಯಾಣ ಕರ್ನಾಟಕ(ಕೆಕೆ) 05, ಉಳಿದ ಭಾಗಕ್ಕೆ (ಎನ್‌ಕೆಕೆ) 15 ಸೇರಿ 20 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಸಿದ್ಧವಾಗಿದ್ದು, ಶೀಘ್ರದಲ್ಲೇ ಕೆಇಎ ವತಿಯಿಂದ ಅಧಿಕೃತವಾಗಿ ಪ್ರಕಟಿಸಲಾಗುವುದು. ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿಗೆ ಕಲ್ಯಾಣ ಕರ್ನಾಟಕ 179 ಹುದ್ದೆಗಳು, ಉಳಿದ ಭಾಗಕ್ಕೆ 1,421 ಸೇರಿ ಒಟ್ಟು 1,600 ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಪ್ರಕಟಿಸಲಾಗಿದೆ.
 ಜು.24ರಂದು ಮುಕ್ತಾಯವಾಗಲಿದೆ.  ಅದೇ ರೀತಿಯಾಗಿ 3,991 ಸಿವಿಲ್ ಕಾನ್‌ಸ್ಟೆಬಲ್ ಹುದ್ದೆಗಳು, 1455 ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ನಡೆಯುತ್ತಿದೆ. ಈ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ 1,639 ಹುದ್ದೆಗಳನ್ನು ಮೀಸಲಿಡಲಾಗಿದೆ.
ಈಗಾಗಲೇ ಸಿವಿಲ್ ಮತ್ತು ಸಶಸ್ತ್ರ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸಬೇಕು. ಉಳಿದ ಹುದ್ದೆಗಳ ಅಧಿಸೂಚನೆಗಳು ಶೀಘ್ರದಲ್ಲೇ ಹೊರಬೀಳಲಿದೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ