Breaking News

ಬೆಳಗಾವಿ:ಮುಂಗಾರಿನ ಹಂಗಾಮಿನಲ್ಲಿ ರೋಗ ಬಾಧಿಸುವ ಆತಂಕ

Spread the love

ಬೆಳಗಾವಿ:ಮುಂಗಾರಿನ ಹಂಗಾಮಿನಲ್ಲಿ  ಜಿಲ್ಲೆಯ ವಿವಿಧ ಭಾಗಗಳಲ್ಲಿ ಗುರುವಾರ ಜಿಟಿಜಿಟಿ ಮಳೆ ಸುರಿದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ ದಿನವಿಡೀ ತಂಪಾದ ವಾತಾವರಣ ಮುಂದುವರಿಯಿತು. ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ರೈತರಲ್ಲಿ ಒಂದೆಡೆ ಸಂತಸ ಮೂಡಿದರೆ, ಮತ್ತೊಂದೆಡೆ ಬೆಳೆಗಳಿಗೆ ರೋಗ ಬಾಧಿಸುವ ಆತಂಕ ಹೆಚ್ಚಾಗಿದೆ.
ಕಳೆದ ಎರಡು ದಿನಗಳಿಂದ ಬೆಳಗಾವಿ ಮಹಾನಗರದಲ್ಲಿ ನಿರಂತವಾಗಿ ಜಿಟಿಜಿಟಿ ಮಳೆ ಸುರಿಯುತ್ತಿದೆ. ಗ್ರಾಮೀಣ ಭಾಗದಲ್ಲಿ ಒಮ್ಮೆ ಮಳೆಗಿಂತ ಮೂಡಕವಿದ ತಂಪಾದ ವಾತಾವರಣವಿದೆ. ಗೋಕಾಕ, ರಾಯಬಾಗ, ಹುಕ್ಕೇರಿ, ಖಾನಾಪುರ, ಕಿತ್ತೂರು, ಸವದತ್ತಿ, ಯರಗಟ್ಟಿ, ರಾಮದುರ್ಗ ಭಾಗದಲ್ಲಿ  ಉತ್ತಮ ಮಳೆ ಸುರಿದಿದೆ. ಇನ್ನೂಳಿದ ತಾಲೂಕಿನಲ್ಲಿ ತುಂತುರು ರೀತಿಯಲ್ಲಿ ಮಳೆ ಸುರಿಯುತ್ತಿದೆ.
ಜಿಲ್ಲೆಯ ಹಲವೆಡೆ ಮುಂಗಾರು ಬೆಳೆಗಳಾದ ಸೋಯಾಬೀನ, ಮೆಕ್ಕೆಜೋಳ, ಹೆಸರು, ಶೇಂಗಾ, ಸೂರ್ಯಕಾಂತಿ, ಹತ್ತಿ ಸೇರಿ ವಿವಿಧ ಬೆಳೆಗಳು ಉತ್ತಮ  ಹಂತದಲ್ಲಿವೆ. ಆದರೆ, ಹವಾಮಾನ ವೈಪರಿತ್ಯ, ಒಮ್ಮೆ ಮಳೆ ಮತ್ತೊಮ್ಮೆ ಬಿಸಿಲು, ತಂಪಾದ ವಾತಾವರಣದಿಂದ ಶಿಲೀಂಧ್ರ ಹಾಗೂ ಎಲೆಚುಕ್ಕೆ ಸೇರಿದಂತೆ ವಿವಿಧ ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆಯಿಂದೆ ಎಂಬ ಆತಂಕಕ್ಕೆ ರೈತರು ಒಳಗಾಗಿದ್ದಾರೆ.
ರೈತರು ತಮ್ಮ ಹೊಲಗಳನ್ನು ನಿಯಮಿತವಾಗಿ ಪರಿಶೀಲಿಸಿ ರೋಗಲಕ್ಷಣಗಳು ಕಂಡುಬಂದ ತಕ್ಷಣ ಸೂಕ್ತ ಔಷಧೋಪಚಾರ ಕೈಗೊಳ್ಳಬೇಕು. ಅನಗತ್ಯವಾಗಿ ಔಷಧ ಸಿಂಪಡಿಸುವ ಬದಲು ತಜ್ಞರ ಮಾರ್ಗದರ್ಶನದಂತೆ ಸಿಂಪಡಿಸುವುದು ಉತ್ತಮ.ಮುಂದಿನ ಕೆಲ ದಿನಗಳವರೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಹಾಗೂ ತಂಪಾದ ವಾತಾವರಣ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ