Breaking News

ಗೃಹ ಸಚಿವರ ತವರಲ್ಲೇ ಪೊಲೀಸ್‌ ಠಾಣೆಯಿಂದ ಪೋಕ್ಸೊ ಕೇಸ್‌ ಆರೋಪಿ ಪರಾರಿ

Spread the love

ಕಲಬುರಗಿ: ಗೃಹ ಸಚಿವರ ತವರಲ್ಲೇ ಪೊಲೀಸ್‌ ಠಾಣೆಯಿಂದ ಪೋಕ್ಸೊ ಪ್ರಕರಣದ  ಆರೋಪಿ ಪರಾರಿಯಾಗಿರುವ ಘಟನೆ ನಡೆದಿದೆ.

ಜಿಲ್ಲೆಯ ಅಫಜಲಪುರ್ ಪೊಲೀಸ್ ಠಾಣೆಯಿಂದ  ಪೋಕ್ಸೊ ಪ್ರಕರಣದ ಆರೋಪಿ ಮಂಜಾನಾಥ್ ಪರಾರಿಯಾಗಿದ್ದಾನೆ. ಕಳೆದ ಒಂದು ವಾರದ ಹಿಂದೆ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಠಾಣೆಗೆ ಪೊಲೀಸರು ಕರೆತಂದಿದ್ದರು.

ಗುರುವಾರ ಮಧ್ಯರಾತ್ರಿ ಠಾಣೆಯ‌ ಲಾಕಪ್‌ನಿಂದ ಆರೋಪಿ ಎಸ್ಕೇಪ್ ಆಗಿದ್ದಾನೆ. ಪೊಲೀಸರು ಠಾಣೆಯಲ್ಲಿ ಮಲಗಿರುವುದನ್ನ ಕಂಡು ಆರೋಪಿ ಪರಾರಿಯಾಗಿದ್ದಾನೆ. ಆರೋಪಿ ಎಸ್ಕೇಪ್‌ ಆಗುವ ದೃಶ್ಯ ‘ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ.

ಇದೀಗ ಆರೋಪಿ ಪತ್ತೆಗಾಗಿ ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯದಲ್ಲಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ