Breaking News

ಶೀಲ ಶಂಕಿಸಿ ಪತಿಯಿಂದ ಪತ್ನಿಯ ಭೀಕರ ಹತ್ಯೆ

Spread the love

ಮಂಡ್ಯ: ಪತ್ನಿಯ ಶೀಲ ಶಂಕಿಸಿ ಪತಿಯೇ  ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆಲಗೂಡು ಗ್ರಾಮದಲ್ಲಿ ಜರುಗಿದೆ.

ರಶ್ಮಿ ಕೊಲೆಯಾದ ದುರ್ದೈವಿ ಮಹಿಳೆ. ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಪತಿ ರಮೇಶ್ ಈ ಕೃತ್ಯ ಎಸಗಿದ್ದಾನೆ. ಆಲಗೂಡು ಗ್ರಾಮದ ನಿವಾಸಿಯಾದ ರಮೇಶ್, ಕಳೆದ ಕೆಲವು ಸಮಯದಿಂದ ಪತ್ನಿ ರಶ್ಮಿ ಅವರ ನಡತೆಯ ಮೇಲೆ ಸಂಶಯ ಪಡುತ್ತಿದ್ದ ಎನ್ನಲಾಗಿದೆ. ಇದೇ ವಿಷಯವಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು.

ಘಟನೆ ನಡೆದ ನಿನ್ನೆ ರಾತ್ರಿ ಜಗಳ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ರಮೇಶ್ ಕಬ್ಬಿಣದ ರಾಡಿನಿಂದ ರಶ್ಮಿ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ರಶ್ಮಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಬಳಿಕ ಆರೋಪಿ ರಮೇಶ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಪ್ರಸ್ತುತ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಈ ಕೊಲೆಗೆ ಸಂಬಂಧಿಸಿದಂತೆ ಮಂಡ್ಯದ ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ರಮೇಶನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ