Breaking News

ಚೌಟ್ರಿಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ – ಹೆಚ್‌ಡಿಕೆ ವಿಡಿಯೋ ರಿಲೀಸ್‌ ಬೆನ್ನಲ್ಲೇ ಡಿಕೆಶಿ ವಾರ್ನಿಂಗ್‌

Spread the love

ಬೆಂಗಳೂರು: ಕಲ್ಯಾಣ ಮಂಟಪಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಅವರು ಬಿಎಲ್‌ಓಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕೆಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯವರು  ಕಲ್ಯಾಣ ಮಂಟಪಗಳಲ್ಲಿ ಸಿಬ್ಬಂದಿ SIR ಫಾರಂ ತುಂಬುತ್ತಿರುವ ವಿಡಿಯೋ ಹಂಚಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಕಲ್ಯಾಣ ಮಂಟಪಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ. ಬಿಎಲ್ಓಗಳೇ ಅರ್ಜಿಗಳನ್ನ ಹಂಚಬೇಕು, ಅವರೇ ಮನೆಗೆ ಹೋಗಿ ಅರ್ಜಿ ಕೊಡಬೇಕು, ಅಲ್ಲಿಯೇ ತುಂಬಬೇಕು ಎಂದು ಎಚ್ಚರಿಸಿದ್ದಾರೆ.

ಕಲ್ಯಾಣ ಮಂಟಪ ಅಥವಾ ಬೇರೆಡೆ ಕುಳಿತು ಅರ್ಜಿ ತುಂಬಲು ಯಾರಿಗೂ ಅವಕಾಶ ಇರಲ್ಲ. ರಾಮನಗರ, ಜಯನಗರ, ಕುಣಿಗಲ್, ಚಾಮರಾಜಪೇಟೆ ಎಲ್ಲಾದರೂ ಸರಿ ಮನೆಗಳಿಗೆ ಹೋಗಿ ಅರ್ಜಿ ತುಂಬಬೇಕು ಎಂದು ಅವರು ಹೇಳಿದ್ದಾರೆ.

ಪ್ರತಿಯೊಬ್ಬ ನಾಗರೀಕನಿಗೂ ಮತದಾನದ ಹಕ್ಕು ಕೊಡಬೇಕಾಗಿರೋದು ಸರ್ಕಾರದ ಕರ್ತವ್ಯ. ವಿರೋಧ ಪಕ್ಷದವರು ಆರೋಪ ಮಾಡೋಕೆ ಇರೋದು. ನಾವು ಅಧಿಕಾರದಲ್ಲಿ ಇರೋರು, ನಮ್ಮ ಕರ್ತವ್ಯ ನಾವು ಮಾಡ್ತೀವಿ ಎಂದಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ