Breaking News

ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರೂ. ಬಿಡುಗಡೆ: ಈಶ್ವರ ಖಂಡ್ರೆ

Spread the love

ಬೆಂಗಳೂರು: ಎಲ್ ನಿನೋ  ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸುಮಾರು 85 ಕೋಟಿ ರೂಪಾಯಿಗಳಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. 30 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರು  ಪೂರೈಕೆಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಗಳ ಒಳಗಾಗಿ ಪರಿಹರಿಸುವಂತೆ ಸೂಚಿಸಲಾಗಿದೆ. ಖಾಸಗಿ ತೆರೆದ ಬಾವಿ, ಬೋರ್ ವೆಲ್‌ಗಳಿಂದ ನೀರುಪಡೆದು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ತೀರಾ ಅಗತ್ಯಬಿದ್ದ ಸಂದರ್ಭದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 2-3 ದಿನದಿಂದ ಮಳೆ ಆಗುತ್ತಿದ್ದು, ಕೆಲವು ಜಲಾಶಯಗಳಿಗೆ ನೀರು ಬರುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಜೀವಜಲವನ್ನು ಹಿತಮಿತವಾಗಿ ಜನರು ಬಳಸಬೇಕು, ಪೋಲು ಮಾಡಬಾರದು ಎಂದು ಮನವಿ ಮಾಡಿದ ಅವರು, ಪಂಚಾಯ್ತಿಗಳು ನೀರು ಸೋರಿಕೆ ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ