Breaking News

ಸಿಎಂ ಆಗಿ ತಿಂಗಳು ಪೂರ್ಣ – ಸಿದ್ದರಾಮಯ್ಯ ಜೊತೆ ಡಿಕೆಶಿ ಫ್ಯಾಮಿಲಿ ಬ್ರೇಕ್‌ಫಾಸ್ಟ್‌

Spread the love

ಬೆಂಗಳೂರು: ಸಿಎಂ ಆಗಿ ತಿಂಗಳು ಪೂರ್ಣಗೊಂಡ ಹಿನ್ನೆಲೆ ಸಿಎಂ ಡಿಕೆ ಶಿವಕುಮಾರ್  ಅವರು ಕುಟಂಬ ಸಮೇತರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಉಪಹಾರದ ಜೊತೆ ಮಾತುಕತೆ ನಡೆಸಿದರು.

ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಪತ್ನಿ ಉಷಾ ಹಾಗೂ ಸಹೋದರ ಡಿಕೆ ಸುರೇಶ್ ಅವರು ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ವೇಳೆ ಡಿಕೆಸು ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಒಟ್ಟಿಗೆ ಉಪಹಾರ ಕೂಟ ನಡೆಸಿದ್ದಾರೆ. ಈ ವೇಳೆ ಡಿಕೆಶಿ ಪತ್ನಿ ಉಷಾ ಹಾಗೂ ಡಿಕೆಶಿ ಅವರು ಉಡುಗೊರೆಗಳನ್ನು ಕೊಟ್ಟು ಅಭಿನಂದಿಸಿದ್ದಾರೆ.

ಈ ಮೂಲಕ ಸುಲಲಿತವಾಗಿ ಅಧಿಕಾರ ಹಸ್ತಾಂತರ ಮಾಡಿಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸದಾ ಉತ್ತಮ ಬಾಂಧವ್ಯದ ಸಂದೇಶವನ್ನು ನೀಡಿ, ಡಿಕೆಶಿ ಒಗ್ಗಟ್ಟನ್ನು ತೋರ್ಪಡಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ