Breaking News

ಹುಸಿ ಬಾಂಬ್ ಕರೆಗಳು, ಇಮೇಲ್ ಪತ್ತೆ ಹಚ್ಚೋದು ಕಷ್ಟ- ಪ್ರಿಯಾಂಕ್ ಖರ್ಗೆ

Spread the love

ಬೆಂಗಳೂರು : ಹುಸಿ ಬಾಂಬ್ ಕರೆಗಳು , ಇಮೇಲ್‌ಗಳನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸ. ಆದರೂ ಹುಸಿ ಬಾಂಬ್ ಕರೆಗಳ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ತಿಳಿಸಿದ್ದಾರೆ.

ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಬಂದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಗಾಗ ಇಂತಹ ಹುಸಿ ಬೆದರಿಕೆಗಳು ಬರುತ್ತದೆ. ವಿಮಾನ ನಿಲ್ದಾಣ ಇರಬಹುದು, ಥರ್ಮಲ್ ಪವರ್ ಪ್ಲ್ಯಾಂಟ್ ಇರಬಹುದು.‌ ಎಚ್ಚೆತ್ತುಕೊಂಡು ಸೂಕ್ತ ಕ್ರಮ ತೆಗೆದುಕೊಂಡಿದ್ದೇವೆ ಎಂದರು.

ನಿರಂತರವಾಗಿ ಸೈಬರ್ ದಾಳಿ, ಹುಸಿ ಕರೆಗಳು ಇದಕ್ಕೆ ಅಗತ್ಯ ಸಿಬ್ಬಂದಿ ಮತ್ತು ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಂಡಿದ್ದೇವೆ. ಮತ್ತಷ್ಟು ನಿಗಾ ಇಡುವ ಕೆಲಸ ಮುಂದುವರೆಸುತ್ತೇವೆ. ಹುಸಿ ಕರೆ, ಇಮೇಲ್ ಗಳನ್ನ ಪತ್ತೆ ಹಚ್ಚೋದು ಕಷ್ಟ. ಐಪಿ ಅಡ್ರೆಸ್ ಬೇರೆ ಬೇರೆ ದೇಶದಲ್ಲಿ ಇರುವುದರಿಂದ ಮ್ಯಾಪ್ ಮಾಡಲು ಕಷ್ಟ ಆಗುತ್ತದೆ. ಆದರೆ ಇದನ್ನು ತಡೆ ಹಿಡಿಯೋದು ನಮ್ಮ ಜವಾಬ್ದಾರಿ ಎಂದರು.

ಮೂಲ ಕಂಡು ಹಿಡಿಯುವುದು ಕಷ್ಟ. ಆದರೂ ಪ್ರಯತ್ನ ಮಾಡ್ತೀವಿ. ಅಂತಾರಾಷ್ಟ್ರೀಯ ಸಂಸ್ಥೆಗಳ ಜೊತೆಗೂ ನಮ್ಮ ಒಪ್ಪಂದ ಇದೆ. ಅಂತಹದ್ದು ಏನಾದರೂ ಇದ್ದರೆ ಕೇಂದ್ರದ ಸಹಾಯ ಪಡೆಯುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ