Breaking News

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಹೆರಾಯಿನ್ ಸಾಗಿಸುತ್ತಿದ್ದ ಇಬ್ಬರ ಬಂಧನ

Spread the love

ಬೆಳಗಾವಿ: ಬೆಳಗಾವಿಯ ಸಿಸಿಬಿ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಬೆಳಗಾವಿ ನಗರದ ಕಂಗ್ರಾಳಿ ಕೆ ಹೆಚ್ ಗ್ರಾಮದ ಗಜಾನನ ಪಾಟೀಲ್ ಹಾಗೂ ರಾಮದೇವ ಗಲ್ಲಿಯ ವಿನಾಯಕ ಖಂಡಾಳೆ ಬಂಧಿತರು ಎಂದು ಗುರುತಿಸಲಾಗಿದೆ.

ಆರೋಪಿಗಳಿಬ್ಬರು ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹಣ್ಣಿನ ಮಾರುಕಟ್ಟೆಯ ಕಾಂಪ್ಲೇಕ್ಸ್ ಬಳಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ಸಿಸಿಬಿ ವಿಭಾಗದ ಪಿಐ ಮಂಜುನಾಥ ನಾಯಿಕ ಅವರ ತಂಡ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂಧಿ ದಾಳಿ ನಡೆಸಿ ಒಟ್ಟು 4,96,000 ರೂ ಮೌಲ್ಯದ 24.80 ಗ್ರಾಂ ಹೆರಾಯಿನ್ ವಶಕ್ಕೆ ಪಡೆದು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮರದ ರೆಂಬೆ ಬಿದ್ದು ಎರಡು ಕಾರುಗಳು ಜಖಂ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್‌ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ