Breaking News

ಮಾದಕ ವ್ಯಸನದಿಂದ ದೂರವಿರಿ

Spread the love

ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಉಂಟುಮಾಡುವುದರ ಜತೆಗೆ ಅಪರಾಧ ಚಟುವಟಿಕೆಗಳಿಗೆ ದಾರಿಮಾಡಿಕೊಡುತ್ತದೆ ಎಂದು ರಾಮದುರ್ಗ ಉಪವಿಭಾಗದ ಡಿವೈಎಸ್ಪಿ ಚಿದಂಬರ ಮಡಿವಾಳರ ಹೇಳಿದರು.
ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಮುರಗೋಡ ಪೊಲೀಸ್ ಆಶ್ರಯದಲ್ಲಿ ಶುಕ್ರವಾರ ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತು ವಿರೋಧಿ ಜಾಗತಿ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರು, ವಿದ್ಯಾರ್ಥಿಗಳು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಪಡೆದು ದುಶ್ಚ್ಚಟಗಳಿಂದ ದೂರವಿದ್ದು ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನ  ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.
ಸಿಪಿಐ ಐ.ಎಂ.ಮಠಪತಿ ಮಾತನಾಡಿ, ಡ್ರಗ್ಸ್‌ನಂತಹ ಮಾರಕ ವ್ಯಸನಗಳಿಗೆ ಬಲಿಯಾಗುತ್ತಿರುವ ಯುವಕರನ್ನು ರಕ್ಷಿಸುವುದು ಜಾಗೃತಿ ಮುಖ್ಯ ಉದ್ದೇಶವಾಗಿದೆ ಎಂದರು.
ಮಾದಕ ವಸ್ತುಗಳ ಮಾರಾಟ, ಸಾಗಾಣೆ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112ಗೆ ಮಾಹಿತಿ ನೀಡುವಂತೆ ಕೋರಿದರು.
ಪಿಎಸ್‌ಐ ಎಲ್.ಬಿ.ಮಾಳಿ, ಎಎಸ್‌ಐ ಬಿ.ಕೆ.ರಂಗಣ್ಣವರ, ಎಸ್‌ಡಿಎಂಸಿ ಉಪಾಧ್ಯಕ್ಷ ಬಸಯ್ಯ ಸಾಲಿಮಠ, ಕಾಲೇಜು ಸಿಡಿಸಿ ಸದಸ್ಯರಾದ ಈರಣ್ಣ ಹೊಸಮನಿ, ಉಮೇಶ ಮಾಗುಂಡನ್ನವರ, ಪ್ರಾಚಾರ್ಯ ನಾಗರಾಜು ಕೆ., ಮುಖ್ಯಶಿಕ್ಷಕಿ ವಿದ್ಯಾ ಕಲ್ಯಾಣಿ, ಉಪನ್ಯಾಸಕ ಬಿ.ಎಸ್.ದೊಡ್ಡಮನಿ, ಬಸವರಾಜ ಬಿಷ್ಠನ್ನವರ ಇತರರಿದ್ದರು.

Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ