Breaking News

ರಾಮ ಮಂದಿರ ಆಯ್ತು, ಈಗ ಬದರಿನಾಥ ಧಾಮದಲ್ಲೂ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ ಆದೇಶ

Spread the love

ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬೆನ್ನಲ್ಲೇ ಇದೀಗ ಬದರಿನಾಥ ಧಾಮದಲ್ಲೂ ಕಾಣಿಕೆ ದುರುಪಯೋಗವಾಗಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದು, ತನಿಖೆಗೆ ಆದೇಶಿಸಲಾಗಿದೆ.

ಬದರಿನಾಥ-ಕೇದರನಾಥ ದೇವಸ್ಥಾನ ಸಮಿತಿ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೇಣಿಗೆ ದುರುಪಯೋಗದ ಆರೋಪಗಳನ್ನು ದೇವಸ್ಥಾನ ಸಮಿತಿಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ತನಿಖಾ ಸಮಿತಿಯೊಂದನ್ನು ರಚಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಈ ಆರೋಪಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಸಂಬಂಧಪಟ್ಟ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಮರದ ರೆಂಬೆ ಬಿದ್ದು ಎರಡು ಕಾರುಗಳು ಜಖಂ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್‌ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ