Breaking News

ಇಸ್ರೋ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ – ಯುಪಿ ಮೂಲದ ಆರೋಪಿ ಅರೆಸ್ಟ್‌

Spread the love

ಬೆಂಗಳೂರು: ಇಲ್ಲಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ  ಕೇಂದ್ರ ಕಚೇರಿಗೆ ಬಾಂಬ್ ಇಡುವುದಾಗಿ ಇ-ಮೇಲ್ ಬೆದರಿಕೆಹಾಕಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಆರೋಪಿಯನ್ನ ಸಂಜಯನಗರ ಪೊಲೀಸರು ಬಂಧಿಸಿದ್ದಾರೆ. ಯುಪಿ ಮೂಲದ ಆರೋಪಿಯನ್ನ ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಆರೋಪಿ ಬಳಿ ಇದ್ದ ಎಲೆಕ್ಟ್ರಾನಿಕ್‌ ಸಾಧನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ಆರೋಪಿಯ ವಿಚಾರಣೆ ವೇಳೆ ಮಾನಸಿಕ ಅಸ್ವಸ್ಥನೆಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನ ಪೊಲೀಸರು ಹೆಚ್ಚಿನ ತನಿಖೆ ಮಾಡ್ತಿದ್ದಾರೆ.

ನಿನ್ನೆ ಇಸ್ರೋ ಕಚೇರಿಗೆ ಬಾಂಬ್ ಇಡುವುದಾಗಿ ಮೇಲ್ ಮಾಡಿ ಬೆದರಿಕೆ ಹಾಕಿದ್ದ. ಈ ಸಂಬಂಧ ನಿನ್ನೆ ಇಸ್ರೋ ಸಂಸ್ಥೆಯ ಆಡಳಿತಾಧಿಕಾರಿ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ