Breaking News

ಮಡಿಕೇರಿಯಲ್ಲಿ 3 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

Spread the love

ಮಡಿಕೇರಿ: ಕೊಡಗು ಜಿಲ್ಲೆಯ  ಮಡಿಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ 7 ಗಂಟೆಯಿಂದ ಧಾರಾಕಾರ ಮಳೆ  ಸುರಿಯುತ್ತಿದೆ. ಕಳೆದ ಮೂರು ಗಂಟೆಗಳಿಗೂ ಹೆಚ್ಚು ಕಾಲ ಬಿಟ್ಟುಬಿಡದೆ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಡಿಕೇರಿ ನಗರ ಸೇರಿದಂತೆ ಸೋಮವಾರಪೇಟೆ, ವಿರಾಜಪೇಟೆ ಮತ್ತು ಮೂರ್ನಾಡು ಭಾಗಗಳಲ್ಲೂ ಉತ್ತಮ ಮಳೆಯಾಗಿದೆ. ನಿರಂತರ ಮಳೆಯಿಂದ ರಸ್ತೆಗಳು ಕೆರೆಯಂತಾಗಿವೆ.

ಧಾರಾಕಾರ ಮಳೆಯಿಂದ ಹಳ್ಳ-ಕೊಳ್ಳಗಳು ಆತುಂಬಿ ಹರಿಯಲಾರಂಭಿಸಿವೆ. ಹಲವು ಕಡೆ ನೀರಿನ ಮಟ್ಟ ಏರಿಕೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಹವಾಮಾನದಲ್ಲಿ ಏಕಾಏಕಿ ಬದಲಾವಣೆಯಾಗಿದ್ದು, ಮಳೆ ಇನ್ನೂ ಮುಂದುವರಿಯುತ್ತಿದೆ. ಮಳೆ ಮುಂದುವರಿದರೆ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ