Breaking News

ಕೈಕೊಟ್ಟ ಮಳೆ – ಪೂರ್ವ ಮುಂಗಾರು ನಂಬಿ ಬಿತ್ತನೆ ಮಾಡಿದ್ದ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

Spread the love

ಬಳ್ಳಾರಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ವಿಜಯನಗರ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೂರ್ವ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ಬೆಳೆ ಇದೀಗ ಒಣಗಲಾರಂಭಿಸಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ.

ಮಳೆ ಬರದ ಕಾರಣ ಬೆಳೆ ಒಣಗದಂತೆ ಕಾಪಾಡಲು ರೈತರು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ ಕೈತಪ್ಪುವ ಆತಂಕದಲ್ಲಿ ಅನ್ನದಾತರು ದಿನ ಕಳೆಯುತ್ತಿದ್ದಾರೆ.

ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ತಾಲೂಕಿನ ಹಂಪಿನಕಟ್ಟೆ-ವೆಂಕಟಾಪುರ ಗ್ರಾಮದ ರೈತ ಮಹಿಳೆ ಲಕ್ಷ್ಮವ್ವ ತಮ್ಮ ನಾಲ್ಕೂವರೆ ಎಕರೆ ಜಮೀನಿನಲ್ಲಿ ಜೋಳ ಬಿತ್ತನೆ ಮಾಡಿದ್ದರು. ಆದರೆ ಕಳೆದ 20 ದಿನಗಳಿಂದ ಮಳೆಯೇ ಇಲ್ಲದ ಕಾರಣ ಜೋಳದ ಬೆಳೆ ಒಣಗಲು ಆರಂಭಿಸಿದೆ.

ಬೆಳೆ ಉಳಿಸಿಕೊಳ್ಳಲು ಲಕ್ಷ್ಮವ್ವ ಕುಟುಂಬ ಟ್ಯಾಂಕರ್ ಮೂಲಕ ನೀರು ಹಾಯಿಸುತ್ತಿದೆ. ಈಗಾಗಲೇ 9 ಪ್ಯಾಕೆಟ್ ಜೋಳದ ಬೀಜ ಬಿತ್ತನೆ ಮಾಡಿ ಸುಮಾರು ₹40 ಸಾವಿರ ಖರ್ಚು ಮಾಡಿದ್ದೇವೆ. ಮಳೆ ಬರದ ಕಾರಣ ಬೆಳೆ ಒಣಗುತ್ತಿದೆ. ಈಗ ಬೆಳೆ ಉಳಿಸಿಕೊಳ್ಳಲು ಮತ್ತೆ ಸಾವಿರಾರು ರೂಪಾಯಿ ಖರ್ಚು ಮಾಡಿ ಟ್ಯಾಂಕರ್ ನೀರು ತರಿಸುತ್ತಿದ್ದೇವೆ ಎಂದು ರೈತ ಮಹಿಳೆ ನೋವು ವ್ಯಕ್ತಪಡಿಸಿದ್ದಾರೆ.

ಮುಂಗಾರು ಮಳೆ ಮತ್ತಷ್ಟು ವಿಳಂಬವಾದರೆ ಬೆಳೆ ಸಂಪೂರ್ಣ ನಾಶವಾಗುವ ಭೀತಿ ಎದುರಾಗಿದ್ದು, ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ